ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತ್ಯೋತ್ಸವ ಆಚರಿಸಿದರು
ಲೋಕದರ್ಶನ ವರದಿ
ಮುಂಡಗೋಡ:ಮುಂಡಗೋಡ ಪಟ್ಟಣದ ಗಾಂಧಿನಗರದ ಮಳೆ ಬಸವಣ್ಣ ದೇವಸ್ಥಾನದಲ್ಲಿ ಮಂಗಳವಾರ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಬಸವ ಜಯಂತಿ ಆಚರಣೆ ಮಾಡಲಾಯಿತು.
ಬೆಳಗ್ಗೆ ದೇವಸ್ಥಾನದಲ್ಲಿ ಬಸವಣ್ಣ ದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಸವೇಶ್ವರರ ಭಾವಚಿತ್ರ ಮತ್ತು ಪಲ್ಲಕ್ಕಿ ಮೆರವಣಿಯನ್ನು ಡೊಳ್ಳು ಮೇಳದೊಂದಿಗೆ ನಡೆಸಿ ಬಸವನಬೀದಿಯಲ್ಲಿರುವ ಶ್ರೀಬಸವೇಶ್ವರ ಮತ್ತು ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ನಂತರ ಮಳೆ ಬಸವಣ್ಣ ದೇವಸ್ಥಾನಕ್ಕೆ ಮೆರವಣಿಗೆ ಮರಳಿ ತೊಟ್ಟಿಲು ತೂಗುವ ಶಾಸ್ತ್ರ ನೆರವೇರಿತು. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರೆ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.