ವಿಶ್ವಕರ್ಮ ಜಯಂತಿ ಆಚರಣೆ
Vishwakarma Jayanti celebration
ಯರಗಟ್ಟಿ 18: ಸಮೀಪದ ಮುನವಳ್ಳಿ ಪಟ್ಟಣದ ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಭವ್ಯ ಮೆರವಣಿಗೆಯ ಉದ್ಘಾಟನೆಯನ್ನು ಶ್ರೀ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಸ್ವಾಮೀಜಿ ನೆರವೇರಿಸಿ ಮಾತನಾಡುತ್ತ ಎಲ್ಲ ಜನರಿಗೂ, ಎಲ್ಲ ವರ್ಗದವರಿಗೂ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರವಾಗಿದ್ದು, ಸರಕಾರ ಹಾಗೂ ಜನತೆ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಬೇಕೆಂದರು.
ಮುಖಂಡರಾದ ವಿರೂಪಾಕ್ಷ ಮಾಮನಿ, ಅಂಬರೀಷ ಯಲಿಗಾರ, ಪಂಚನಗೌಡ ದ್ಯಾಮನಗೌಡರ, ರಮೇಶ ಗೋಮಾಡಿ, ಪುರಸಭೆ ಅಧ್ಯಕ್ಷ ಸಿ.ಬಿ.ಬಾಳಿ, ಸವದತ್ತಿ ಎ.ಪಿ.ಎಂ.ಸಿ. ಅಧ್ಯಕ್ಷ ಚಂದ್ರು ಪೂಜೇರ(ಜಂಬ್ರಿ), ಸುಭಾಸ ಗೀದಿಗೌಡ್ರ, ಶ್ರೀಕಾಂತ ಮಲಗೌಡ್ರ, ಗುರುಶಾಂತ ಚಂದರಗಿ, ಡಿ.ಡಿ.ಕಿನ್ನೂರಿ, ಚಂದ್ರು ಮುಚ್ಚಂಡಿ,
ಶ್ರೀ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ಸಕಲ ಮಂಗಲವಾದ್ಯ ವೈಭವಗಳೊಂದಿಗೆ, ಜನಪದ ಮಜಲುಗಳೊಂದಿಗೆ, ಆರತಿ ಕುಂಭ ಹೊತ್ತ ಸುಮಂಗಲೆಯರೊಂದಿಗೆ ಸಂಭ್ರಮ ಹಾಗೂ ಸಡಗರದಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿತು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಹಿರೇ ಅಗಸಿ, ಬಜಾರ ರಸ್ತೆ, ಶ್ರೀ ದಾನಮ್ಮ ಗುಡಿ ರಸ್ತೆ, ಸೂಲಕಟ್ಟಿ ಅಗಸಿ ಶ್ರೀ ಕಾಳಿಕಾದೇವಿ ದೇವಸ್ಥಾನ ತಲುಪಿತು. ನಂತರ ವೇದಿಕೆ ಕಾರ್ಯಕ್ರಮ ಜರುಗಿತು. ವಿಶ್ವಕರ್ಮ ಯುವಕ ಮಂಡಳ, ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಹಾಗೂ ಗಾಯತ್ರಿ ಮಹಿಳಾ ಮಂಡಳ ಸದಸ್ಯರು ಸೇರಿದಂತೆ ಗಣ್ಯರು ಸೇರಿದಂತೆ ಇತರರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 