ಗುರಿ ಸಾಧಿಸಲು ದೃಷ್ಟಿಕೋನ ಮುಖ್ಯ: ಕಛೇರಿಯ ನಿರ್ದೇಶಕ ಡಾ. ವರ್ಧನ
ಗದಗ 18: ಶಿಕ್ಷಕರು ಮಕ್ಕಳೊಂದಿಗೆ ಭಾವನಾತ್ಮಕವಾಗಿ ಅನುಕಂಪ, ಪ್ರೀತಿ ತೋರಿಸುವುದರ ಜೊತೆಗೆ ಆತ್ಮಸ್ಥೈರ್ಯ ತುಂಬುವ ಶಿಕ್ಷಣ ನೀಡಬೇಕಲ್ಲದೇ, ಪಾಠ ಭೋದಿಸುವ ಮೊದಲು ಮಕ್ಕಳ ಮನೋಭೂಮಿಕೆ, ಆಸಕ್ತಿಯ ಬಗ್ಗೆ ತಿಳಿದುಕೊಂಡಾಗ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕಛೇರಿಯ ನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ ನುಡಿದರು.
ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶಕ್ಕಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪ್ರತಿ ವ್ಯಕ್ತಿಯ ಜೀವನದಲ್ಲಿ ಪ್ರೌಢ ಶಿಕ್ಷಣ ಮಹತ್ವದ್ದಾಗಿದೆ. ಮುಖ್ಯ ಶಿಕ್ಷಕರು ತಾವು ಕರ್ತವ್ಯ ನಿರ್ವಹಿಸುವ ಸಂಸ್ಥೆಯ ಮೂಲಾಧಾರರಾಗಿದ್ದು, ಸಹ ಶಿಕ್ಷಕರ ಜೊತೆ ಉತ್ತಮ ಸಂಬಂಧ ಹೊಂದುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಯಾವುದೇ ಸಾಧನೆಗೂ ಮುನ್ನ ಗುರಿಯ ಬಗ್ಗೆ ಸ್ಪಷ್ಟ ಅರಿವಿರಬೇಕು. ಶಿಕ್ಷಣದ ಆಶಯಗಳನ್ನು ಶಿಕ್ಷಕರು ಈಡೇರಿಸಬೇಕು. ಶಾಲೆಯ ಮುನ್ನೋಟದ ಬಗ್ಗೆ ಮುಖ್ಯ ಶಿಕ್ಷಕರು ಸ್ಪಷ್ಟ ಚಿತ್ರಣ ಹೊಂದಿರಬೇಕು. ಸಾಮಾಜಿಕ ಪಿಡುಗುಗಳಿಗೆ, ದುಷ್ಚಟಗಳಿಗೆ ಪ್ರೌಢಶಾಲೆಯ ಮಕ್ಕಳು ಒಳಗಾಗದಂತೆ ಶಿಕ್ಷಕರು ಮತ್ತು ಪಾಲಕರು ಎಚ್ಚರವಹಿಸಬೇಕು ಎಂದು ಡಾ.ಬಿ.ಕೆ.ಎಸ್. ವರ್ಧನ ನುಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಎನ್.ಎಚ್.ನಾಗೂರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯ 285 ಪ್ರೌಢಶಾಲೆಗಳಲ್ಲಿ ಬಾಲಕ, ಬಾಲಕಿಯರು ಸೇರಿ 13,404 ವಿದ್ಯಾಥರ್ಿಗಳು ಇದ್ದು, ಈ ಬಾರಿ ಮಾ.27ರಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದರು. ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶಕ್ಕಾಗಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾಥರ್ಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಲಿಕೆಯಲ್ಲಿ ಹಿಂದುಳಿದ ಸುಮಾರು 4 ಸಾವಿರ ಮಕ್ಕಳಿಗೆ ವಿಶೇಷ ತರಗತಿ ನಡೆಸಲಾಗುತ್ತಿದೆ. ಡಿ. 1ರಿಂದ ಆರಂಭಗೊಂಡ 240 ಓದಿನ ಮನೆಯಲ್ಲಿ 4500 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಪರೀಕ್ಷಾ ಭಯ ನಿವಾರಣೆಗಾಗಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾಗೂರ ತಿಳಿಸಿದರು.
ಗದಗ ಜಿಲ್ಲಾ ಡಯಟ್ ಉಪನ್ಯಾಸಕ ಎಸ್.ಜಿ. ಗಾಂಜಿ, ಜಿಲ್ಲೆಯ ವಿವಿಧ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರೀವಿಕ್ಷಕರು ಹಾಗೂ ವಿವಿಧ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಸಭೆಯಲ್ಲಿ ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 