ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಬಳ್ಳಾರಿ,ಜು.07: ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್ ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಂಭೀರ ಕೊರೊನಾ ಸೊಂಕಿತರ ಅಹವಾಲುಗಳನ್ನು ಆಲಿಸಿದರು.
ಸೊಂಕಿತರ ದುಃಖ-ದುಮ್ಮಾನಗಳಿಗೆ ದನಿಯಾಗುವುದರ ಜತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬಿದರು; ಚಿಂತೆ ಬೇಡ ತಾವು ಗುಣಮುಖರಾಗಿ ಹೊರಬರುತ್ತೀರಿ ಎಂದು ಧೈರ್ಯ ತುಂಬಿದರು.
ವಿವಿಧ ರೀತಿಯ ದೀರ್ಘಕಾಯಿಲೆಗಳಿಂದ ಬಳಲುತ್ತಿರುವ ಗಂಭೀರ ಸೊಂಕಿತರಿಗೆ ಈ ಕೋವಿಡ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಸಚಿವರು ಅನೇಕ ಸೊಂಕಿತರ ಅಹವಾಲನ್ನು ಅತ್ಯಂತ ಸಮಚಿತ್ತದಿಂದ ವಿಚಾರಿಸಿದ್ದು ಕಂಡುಬಂದಿತು.
ಸೊಂಕಿತರು ಇಲ್ಲಿ ಗುಣಮಟ್ಟದ ಊಟ, ಚಿಕಿತ್ಸೆ ಕೊಡಲಾಗುತ್ತಿದೆ ಮತ್ತು ಸ್ವಚ್ಛತೆಯೂ ಚೆನ್ನಾಗಿದೆ; ಆದ್ರೇ ಶೌಚಾಲಯ ದಿನಕ್ಕೆ ಒಂದು ಬಾರಿ ಮಾತ್ರ ಕ್ಲೀನ್ ಮಾಡಲಾಗುತ್ತಿದ್ದು, ಎರಡು ಬಾರಿ ಕ್ಲೀನ್ ಮಾಡುವಂತೆ ಸಚಿವರಲ್ಲಿ ಕೋರಿದರು.
ಸಚಿವ ಆನಂದಸಿಂಗ್ ಅವರು ಸ್ಥಳದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ ಅವರಿಗೆ ಸೂಚಿಸಿ ದಿನಕ್ಕೆ ಮೂರು ಬಾರಿ ಶೌಚಾಲಯ ಸ್ವಚ್ಛಗೊಳಿಸಿ; ಆಹಾರದಲ್ಲಿ ಈಗಿರುವ ಗುಣಮಟ್ಟವೇ ಕಾಪಾಡಿಕೊಳ್ಳಿ ಎಂದು ಸೂಚಿಸಿದರು.
ಕೊರೊನಾ ಬಂದಿದೆ ಎಂಬ ಭಯಬೇಡ;ತಮ್ಮೆಲ್ಲರೊಂದಿಗೆ ಜಿಲ್ಲಾಡಳಿತ ಮತ್ತು ಸರಕಾರವಿದೆ; ತಾವು ಆಸ್ಪತ್ರೆಯೊಳಗೆ ವಿಶ್ರಾಂತಿ ತೆಗೆದುಕೊಂಡು ಗುಣಮುಖರಾಗಿ ಹೊರಬನ್ನಿ ಎಂದು ಹಾರೈಸಿದರು.
ನಂತರ ಸಚಿವರು ಜಿಲ್ಲಾಶಸ್ತ್ರಚಿಕಿತ್ಸಕ ಬಸರೆಡ್ಡಿ ಅವರ ಕೊಠಡಿಯಲ್ಲಿ ಎಲ್ಲ ವೈದ್ಯರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಜಿಲ್ಲಾಡಳಿತದಿಂದ ಹಾಗೂ ಸರಕಾರದಿಂದಾಗಬೇಕಾಗುವ ಸಹಾಯ-ಸಹಕಾರಗಳ ಮಾಹಿತಿಯನ್ನು ವಿವರವಾಗಿ ಪಡೆದರು ಮತ್ತು ವೈದ್ಯರಿಗೆ ಆತ್ಮಸ್ಥೈರ್ಯ ತುಂಬಿದರು.
ಇಷ್ಟು ದಿನಗಳ ಕಾಲ ಸಭೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದೆ ಮತ್ತು ಅಲ್ಲಿಯೇ ಅನೇಕ ಸಲಹೆ-ಸೂಚನೆಗಳನ್ನು ಅಧಿಕಾರಿಗಳಿಗೆ ನೀಡುತ್ತಿದ್ದೆ; ಅವುಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿವೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ಹಾಗೂ ಕೊರೊನಾ ಸೊಂಕಿರತರಿಗೆ ಧೈರ್ಯ ತುಂಬಲು ಭೇಟಿ ನೀಡಿ ಪರಿಶೀಲಿಸಿದೆ ಎಂದು ಸಚಿವ ಆನಂದಸಿಂಗ್ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್, ವಿಮ್ಸ್ ನಿದರ್ೇಶಕ ಡಾ.ದೇವಾನಂದ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಡಿಎಚ್ಒ ಡಾ.ಜನಾರ್ಧನ್ ಮತ್ತಿತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 