ಬಾಪೂಜಿ ನಗರ ಬಡಾವಣೆಗೆ ಭೇಟಿ: ಎಸ್‌ಆರ್ ಅರ್ಜಿ ವಿತರಣೆ ಪರೀಶೀಲಿಸಿದ ಜಿಲ್ಲಾಧಿಕಾರಿ
Visit to Bapuji Nagar Layout: Deputy Commissioner inspects distribution of SR applications.
ಲೋಕದರ್ಶನ ವರದಿ
ಬಳ್ಳಾರಿ 14: ನಗರದ ಬಾಪೂಜಿ ನಗರ ಬಡಾವಣೆಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು, ಸಾರ್ವಜನಿಕರಿಗೆ ವಿತರಿಸಲಾಗುತ್ತಿದ್ದ ಎಸ್‌ಆರ್ ಎನ್ಯೂಮರೇಷನ್ ಫಾರ್ಮ್ಗಳ ವಿತರಣಾ ಪ್ರಕ್ರಿಯೆಯನ್ನು ಪರೀಶೀಲಿಸಿದರು. ಫಾರ್ಮ್ ವಿತರಣೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ, ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಫಾರ್ಮ್ಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಯ ಬಿಸಿಯೂಟ ಪರೀಶೀಲಿಸಿದ ಜಿಲ್ಲಾಧಿಕಾರಿ
ಬಾಪೂಜಿ ನಗರ ಭೇಟಿ ಬಳಿಕ ನೇರವಾಗಿ ಆಂಧ್ರಾಳ್ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಶಾಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪರೀಶೀಲಿಸಿದರು. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದ್ದ ಆಹಾರದ ಗುಣಮಟ್ಟವನ್ನು ವೀಕ್ಷಿಸಿದ ಅವರು, ಬಳಿಕ ವಿದ್ಯಾರ್ಥಿಗಳೊಂದಿಗೆ ಊಟ ಸವಿದರು. ಊಟದ ರುಚಿ ಹಾಗೂ ಗುಣಮಟ್ಟವನ್ನು ಸ್ವತಃ ಪರೀಶೀಲಿಸಿದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಪೌಷ್ಟಿಕ ಹಾಗೂ ಸ್ವಚ್ಛ ಆಹಾರವನ್ನು ನಿರಂತರವಾಗಿ ಒದಗಿಸುವಂತೆ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚಿಸಿದರು.
ಹಾಜರಾತಿ, ಮೂಲಸೌಕರ್ಯ ಪರೀಶೀಲನೆ
ಬಿಸಿಯೂಟ ಪರೀಶೀಲನೆಯ ಬಳಿಕ ಶಾಲೆಯ ಆಡಳಿತಾತ್ಮಕ ಕಾರ್ಯಗಳತ್ತ ಗಮನ ಹರಿಸಿದ ಜಿಲ್ಲಾಧಿಕಾರಿಗಳು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹಾಜರಾತಿ ಪುಸ್ತಕಗಳನ್ನು ಪರೀಶೀಲಿಸಿದರು. ಶಾಲೆಯ ಸುರಕ್ಷತೆ ದೃಷ್ಟಿಯಿಂದ ಅಗತ್ಯವಿರುವ ತಡೆಗೋಡೆ ನಿರ್ಮಾಣದ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚೆ ನಡೆಸಿ, ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು. ಶಾಲಾ ಮಕ್ಕಳ ಆಟದ ಮೈದಾನವನ್ನು ವೀಕ್ಷಿಸಿದ ಅವರು, ಮೈದಾನವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ನಂದೀಶ್, ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ನಿರಂಜನ್, ಪಾಲಿಕೆಯ ಇತರೆ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಶಾಲಾ
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 