ನಿಡಗುಂದಿ-ಮುದ್ದೇಬಿಹಾಳ-ತಾಳಿಕೋಟೆ-ಬಸವನಬಾಗೇವಾಡಿಗೆ ಭೇಟಿ : ಪರೀಶೀಲನೆ
Visit to Nidgundi-Muddebihala-Talikote-Basavanbagewadi: Review
???? ????
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಂದ
ನಿಡಗುಂದಿ-ಮುದ್ದೇಬಿಹಾಳ-ತಾಳಿಕೋಟೆ-ಬಸವನಬಾಗೇವಾಡಿಗೆ ಭೇಟಿ : ಪರೀಶೀಲನೆ
ವಿಜಯಪುರ, ಏಪ್ರಿಲ್ 02 : ಜಿಲ್ಲೆಯ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ ಹಾಗೂ ಬಸವನಬಾಗೇವಾಡಿ ತಾಲೂಕಿಗೆ ಬುಧವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರೀಶೀಲನೆ ನಡೆಸಿದರು.
ನಿಡಗುಂದಿಯ ಪಟ್ಟಣ ಪಂಚಾಯತಿ ಹಾಗೂ ಹೆಬ್ಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳ ಪರೀವೀಕ್ಷಣೆ ನಡೆಸಿ, ನಿಡಗುಂದಿ ಪಟ್ಟಣದಲ್ಲಿ ಮೇಘಾ ಮಾರುಕಟ್ಟೆ ನಿರ್ಮಾಣಕ್ಕಾಗಿ ಸ್ಥಳ ಪರೀಶೀಲನೆ ನಡೆಸಿದರು. ನಂತರ ನಿಡಗುಂದಿಯಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ, ಕ್ಯಾಂಟೀನ್ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರೀಶೀಲನೆ ನಡೆಸಿದ ಅವರು, ಶೀಘ್ರದಲ್ಲಿ ಕ್ಯಾಂಟೀನ್ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ನಿಡಗುಂದಿಯ ಒಳಚರಂಡಿ ನೀರು ಶುದ್ಧೀಕರಣ ಘಟಕದ ಮಂಜೂರಾತಿಗಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೂಡಲೇ ಸ್ಥಳ ವೀಕ್ಷಣೆ ಮಾಡಿ, ನಿರಾಕ್ಷೇಪಣಾ ಪತ್ರ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುದ್ದೇಬಿಹಾಳದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಭೇಟಿ ನೀಡಿದ ಅವರು, ಕಟ್ಟಡದ ಸುತ್ತಮುತ್ತಲೂ ಕಂಪೌಂಡ್ ವಾಲ್, ಪ್ಲೋರಿಂಗ್ ಕಾರ್ಯಕ್ಕೆ ಸೂಚನೆ ನೀಡಿದರು. ಪಟ್ಟಣದಲ್ಲಿರುವ ಕೆರೆಯನ್ನು ವೀಕ್ಷಣೆ ಮಾಡಿ, ಕೆರೆ ಪ್ರದೇಶದಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆರೆಯಲ್ಲಿ ಕಲುಷಿತ ನೀರು ಸೇರದಂತೆ ಎಚ್ಚರಿಕೆ ವಹಿಸಿ, ಸ್ವಚ್ಛತಗೆ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮುದ್ದೇಬಿಹಾಳದಲ್ಲಿ ಮೇಘಾ ಮಾರುಕಟ್ಟೆ ಸ್ಥಾಪನೆಗೆ ಸ್ಥಳ ಪರೀಶೀಲನೆ ನಡೆಸಿದ ಅವರು, ಅಂದಾಜು ಪತ್ರಿಕೆ ಹಾಗೂ ನೀಲನಕ್ಷೆ ಪರೀಶೀಲಿಸಿ, ಕೂಡಲೇ ಕಾಮಗಾರಿ ಆರಂಭಿಸಲು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ನಂತರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರೀಶೀಲನೆ ನಡೆಸಿದರು.
ತಾಳಿಕೋಟೆಗೆ ಭೇಟಿ ನೀಡಿ, ಗ್ರಂಥಾಲಯ ಕಟ್ಟಡ ನಿರ್ಮಾಣದ ಕಾಮಗಾರಿ, ಪ್ರಜಾಸೌಧ ಕಟ್ಟಡ ಸಲುವಾಗಿ ತಾಳಿಕೋಟೆಯಲ್ಲಿ ರಿ.ಸ.ನಂ.623 ಹಾಗೂ 255 ಸ್ಥಳ ಪರೀಶೀಲನೆ ನಡೆಸಿದರು. ತಾಲೂಕಾ ಕಚೇರಿಗೆ ಭೇಟಿ ನೀಡಿ, ಕಚೇರಿಯ ಕಾರ್ಯವೈಖರಿ ಕುರಿತು ಪರೀಶೀಲನೆ ನಡೆಸಿದರು. ಕಸವಿಲೇವಾರಿ ಘಟಕ, ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿ ಸ್ಥಳಕ್ಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ದಿಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ, ನಿಡಗುಂದಿ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಮುದ್ದೇಬಿಹಾಳ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ತಾಳಿಕೋಟೆ ಮುಖ್ಯಾಧಿಕಾರಿ ಮೋಹನ ಜಾಧವ, ತಾಳಿಕೋಟೆ ತಹಶೀಲ್ದಾರ ಕೀರ್ತಿ ಚಾಲಕ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 