ಕಾಯಕ ಸ್ಥಳಕ್ಕೆ ಭೇಟಿ: ಕಾಮಗಾರಿಗಳ ಪ್ರಗತಿ ಪರೀಶೀಲಿಸಿದ ಉಪ ಕಾರ್ಯದರ್ಶಿ
Visit to Work Site: Deputy Secretary Reviews Progress of Works
ತಾಳಿಕೋಟೆ 9: ವಿಜಯಪುರ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ತಾಳಿಕೋಟೆ ತಾಲ್ಲೂಕಿನ ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದ ಸರ್ವೆ ನಂ. 104ರ ಗಾಯತಾಣ ಜಾಗದಲ್ಲಿ ನಡೆಯುತ್ತಿರುವ ಕಂದಕಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಕ್ಷೇತ್ರ ಭೇಟಿ ನೀಡಿ, ಕಾಮಗಾರಿ ಹಾಗೂ ಮಾನವ ದಿನಗಳ ಸೃಜನೆಯ ಪ್ರಗತಿಯನ್ನು ಮಂಗಳವಾರ ಪರೀಶೀಲಿಸಿದರು.
ಕಾಮಗಾರಿ ಸ್ಥಳದಲ್ಲಿ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಅವರ ಕುಂದು-ಕೊರತೆಗಳನ್ನು ಆಲಿಸಿ, ಕೂಲಿಕಾರರ ಶ್ರಮವನ್ನು ಗೌರವಿಸಿ ಸನ್ಮಾನಿಸಿದರು. ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಹೆಚ್ಚಿನ ಉದ್ಯೋಗದ ಅಗತ್ಯವಿರುವುದರಿಂದ, ಇನ್ನಷ್ಟು ಜನರಿಗೆ ನಿರಂತರವಾಗಿ ಕೆಲಸ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಿವಪುರ ಗ್ರಾಮದ ಕಾಮಗಾರಿ ಸ್ಥಳದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮೂಕಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಕೂಲಿಕಾರರಿಗೆ ಕಡ್ಡಾಯವಾಗಿ ಉದ್ಯೋಗ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನುಸೂಯಾ ಚಲವಾದಿ, ಸಹಾಯಕ ನಿರ್ದೇಶಕ (ಗ್ರಾ.ಉ.) ಪಿ.ಎಸ್. ಕಸನಕ್ಕಿ, ಮೂಕಿಹಾಳ ಪಿಡಿಒ ಪಿ.ಎಸ್. ಗಣಗೇರ್, ತಾಂತ್ರಿಕ ಸಂಯೋಜಕ ಮಹಾಂತೇಶ ಕಿಲಾರಟ್ಟಿ, ಐಇಸಿ ಸಂಯೋಜಕ ಮಲಕಪ್ಪ, ತಾಂತ್ರಿಕ ಸಹಾಯಕರಾದ ಮಹಾಂತೇಶ ಪಾಟೀಲ ಹಾಗೂ ಅನ್ನಾನ ಅಹಮದ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್.ಎಂ. ಬಿರಾದಾರ, ಡಿಇಒ ಆರ್.ಎಸ್. ಹಿರೇಮಠ, ಕಾಯಕಮಿತ್ರರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 