ನ.10ರಂದು ಬರಪೀಡಿತ ಪ್ರದೇಶಗಳಿಗೆ ಭೇಟಿ
ಮುಂಡಗೋಡ 07: ಪಟ್ಟಣದ ಪರೀವೀಕ್ಷಣಾ ಮಂದಿರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ ಅವರ ನೇತೃತ್ವದಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು.
ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ನ.10ರಂದು ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಬಿಜೆಪಿ ಶಾಸಕ ಸುನೀಲ ಕುಮಾರ ನೇತೃತ್ವದ ತಂಡ ಜಿಲ್ಲೆಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದೆ. ಶಾಸಕ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಹರತಾಳ ಹಾಲಪ್ಪ, ಶಾಸಕ ಶಿವರಾಮ ಹೆಬ್ಬಾರ, ಅಶೋಕ ನಾಯ್ಕ, ಪ್ರಸನ್ನ ಕೆರಕೈ, ಶಾಸಕ ದಿನಕರ ಶೆಟ್ಟಿ ಮತ್ತು ಶಾಸಕ ಚನ್ನಬಸಪ್ಪ ಬರ ಅಧ್ಯಯನ ತಂಡದಲ್ಲಿರುತ್ತಾರೆ.
ಮೊದಲು ಶಿರಸಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಂತರ ಬನವಾಸಿ, ಬದನಗೋಡ, ಮುಂಡಗೋಡ, ಯಲ್ಲಾಪುರ ಹಾಗೂ ಹಳಿಯಾಳ ಭಾಗಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಿ ರೈತರ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ, ಚಂದ್ರು ಎಸಳೆ, ಅಶೋಕ ಚಲವಾದಿ, ವಿಠ್ಠಲ ಬಾಳಂಬೀಡ, ರವಿ ಹಾವೇರಿ, ಭರತರಾಜ ಹದಳಗಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.