ಸಂಪುಟ ವಿಸ್ತರಣೆ ಸಿಎಂ ಮಾತು ಉಳಿಸಿಕೊಳ್ಳಲಿದ್ದಾರೆ: ಡಿವಿಎಸ್
ಉಡುಪಿ, ಜನವರಿ 20 ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತು ನೀಡಿರುವ ಎಲ್ಲಾ ಭರವಸೆ ಈಡೇರಿಸಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಆಶಯ ವ್ಯಕ್ತಪಡಿಸಿದ್ದಾರೆ .ಕೃಷ್ಣ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು., ಸಂಪುಟ ವಿಸ್ತರಣೆಗೆ ಸಂಬಂಧಿಸಿದ ನಿರ್ಧಾರವನ್ನು ಪಕ್ಷದ ಹಿರಿಯ ನಾಯಕರ ಅನುಮೋದನೆ ಪಡೆದು ತೀರ್ಮಾನಿಸಲಾಗುವುದು ಸಿಎಂ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ವಿಸ್ತರಣೆ ನಡೆಯಲಿದೆ ಎಂದು ಹೇಳಿದರು. ಪ್ರಸ್ತುತ ಸಿಎಎ ವಿರೋಧಿ ಮತ್ತು ಎನ್‌ಆರ್‌ಸಿ ಪ್ರತಿಭಟನೆಗಳ ಕುರಿತು ಮಾತನಾಡಿದ ಅವರು, ಕಾನೂನಿನ ಅರಿವಿನ ಕೊರತೆಯಿಂದಾಗಿ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ ಎಂದರು.ಈ ನಡುವೆ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಹೊಸ, ಹೆಚ್ಚುವರಿ ಉಪಮುಖ್ಯುಮಂತ್ರಿ ಹುದ್ದೆ ಕುರಿತು ಮಾತನಾಡಿ, ಈ ವಿಷಯದ ಬಗ್ಗೆ ಪಕ್ಷದ ಹೊರಗೆ ಚರ್ಚೆ ನಡೆಯುತ್ತಿದೆ ಆದರೆ ಪಕ್ಷ ಈ ವಿಚಾರವಾಗಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಲ್ಲ ನಾಯಕರು ತಲೆಭಾಗಲಿದ್ದಾರೆ ಎಂದು ಅವರು ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 