ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿ
Voluntary blood donation camp successful
ಸವದತ್ತಿ 03: ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಗುರ್ಲಹೊಸೂರ ಸರ್ಕಾರಿ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾಂಗ್ರೆಸ್ ಮುಖಂಡ ಅಶ್ವಥ್ ವೈದ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ರಕ್ತದಾನ ಮಹಾದಾನವಾಗಿದ್ದು, ಒಬ್ಬರು ನೀಡುವ ರಕ್ತದಿಂದ ಮೂರು ಜೀವಗಳನ್ನು ಉಳಿಸಲು ಸಾಧ್ಯ. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಜೀವ ರಕ್ಷಿಸುವ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು. ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ರಕ್ತದಾನದ ಮಹತ್ವ ಅರಿತು ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆ ಮೆರೆಯಬೇಕು ಎಂದು ಕರೆ ನೀಡಿದರು. ಶಿಬಿರದಲ್ಲಿ ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿಮಠ, ಬಿಇಒ ಎ.ಎ. ಖಾಜಿ, ಡಾ. ಶ್ರೀಪಾದ ಸಬನಿಸ್ ಸೇರಿದಂತೆ ಅಧಿಕಾರಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ, ಸ್ಥಳೀಯ ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 