ಮತದಾರರ ದಿನಾಚರಣೆ: ಪ್ರಬಂಧ ಸ್ಪರ್ಧೆ
ಲೋಕದರ್ಶನ ವರದಿ
ಬಳ್ಳಾರಿ 09: ಸ್ಥಳೀಯ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಕ್ಲಬ್ವತಿಯಿಂದ ಮತದಾರರ ದಿನಾಚರಣೆ ಪ್ರಯುಕ್ತ ಇಂದು ವಿದ್ಯಾರ್ಥಿಗಳಿಗೆ ಕಾಲೇಜು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಯಿತು.
ಈ ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾರತದ ಚುನಾವಣಾ ಆಯೋಗ ಮತ್ತು ಸ್ವೀಪ್ ಸಮಿತಿಯ ನಿರ್ದೇಶನದಂತೆ ಮತದಾರರ ಸಾಕ್ಷರತಾ ಕ್ಲಬ್ಗಳ ಮೂಲಕ ಕಾಲೇಜುಗಳಲ್ಲಿ ಯುವ ಮತದಾರರಲ್ಲಿ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬಳ್ಳಾರಿ ಜಿಲ್ಲಾ ಲೀಡ್ ಕಾಲೇಜು ಆಗಿರುವ ಸರಳಾದೇವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಮತ್ತು ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳನ್ನು ಇದೇ ನವಂಬರ್ 18ನೇ ತಾರೀಖಿನಂದು ಆಯೋಜಿಸಲಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಪದವಿ ಕಾಲೇಜುಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರನ್ನು ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಬಹುಮಾನಗಳನ್ನು ವಿತರಿಸಲಾಗುತ್ತದೆ ಎಂದು ಲೀಡ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎ.ಹೇಮಣ್ಣ ಮಾಹಿತಿ ನೀಡಿದ್ದಾರೆ.
ಈ ಕಾರ್ಯಕ್ರಮವನ್ನು ಲೀಡ್ ಕಾಲೇಜ್ ಮತದಾರರ ಸಾಕ್ಷರತಾ ಕ್ಲಬ್ನ ಸಂಚಾಲಕರಾಗಿರುವ ವೈ.ಜನಾರ್ಧನರೆಡ್ಡಿ ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಂಗಡಿ ನಾಗರಾಜ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.