ಕೊಟ್ಟೂರಿನಲ್ಲಿ ಮತದಾರರ ಜಾಗೃತಿ ಜಾಥಾ
Voter awareness rally in Kottur
ಕೊಟ್ಟೂರು 7: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾರರ ಜಾಗೃತಿ ಜಾಥಾ ಹಾಗೂ ಅರಿವು ಅಭಿಯಾನ ನಡೆಯಿತು. ಜಾಥಾದಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷ ಡಾ. ಆನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಜ್ ಬೇವುರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸರುಲ್, ಜೆಸ್ಕಾಂ ಎಇಇ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್, ಪಶುವೈದ್ಯಾಧಿಕಾರಿ ಚಂದ್ರನಾಯ್ಕ, ಎಪಿಎಂಸಿ ಕಾರ್ಯದರ್ಶಿ ಕೆ.ಕೆ. ಈರಣ್ಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೀಶ್ವರ ದಿನ್ನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.
ಕಾರ್ಯಕ್ರಮವನ್ನು ಸಿ.ಎಂ. ಗುರು ಬಸವರಾಜ್ ಸ್ವಾಗತಿಸಿದರು. ನಂತರ ಮಾತನಾಡಿದ ತಾಲೂಕು ದಂಡಾಧಿಕಾರಿ ಅಮರೇಶ್ ಜಿ.ಕೆ., ಮತದಾರರ ಪಟ್ಟಿ ಪರಿಷ್ಕರಣೆ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, 2002ರ ನಂತರ ಅರ್ಹತೆ ಪಡೆದ ಹೊಸ ಮತದಾರರ ನೋಂದಣಿ ಹಾಗೂ ಮತದಾರರ ವಿವರಗಳ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಎಲ್ಲ ವಾರ್ಡ್ಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಸಂಪೂರ್ಣ ಮಾಹಿತಿಯನ್ನು ಒದಗಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಪ್ರತಿಯೊಬ್ಬ ಅರ್ಹ ನಾಗರಿಕರು ಜವಾಬ್ದಾರಿಯಿಂದ ಭಾಗವಹಿಸಿ, ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರೆ್ಡಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 