ಶಾಸಕ ಶಿವಾನಂದ ಪಾಟೀಲ ಮನೆಗೆ ಮತದಾರರ ಗಣತಿ ನಮೂನೆ ವಿತರಣೆ
ಲೋಕದರ್ಶನ ವರದಿ
ವಿಜಯಪುರ 30: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ತೆರಳಿ ಮತದಾರರ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಎಲ್ಒಗಳು ಮಾಜಿ ಸಚಿವ ಹಾಗೂ ಶಾಸಕ ಶಿವಾನಂದ ಪಾಟೀಲ ಅವರ ನಿವಾಸಕ್ಕೂ ಭೇಟಿ ನೀಡಿ ಮತದಾರರ ಗಣತಿ ನಮೂನೆಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ವಿಜಯ ಮೆಕ್ಕಳಕಿ ಹಾಗೂ ಸಂಬಂಧಿತ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.