ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ  Voter list revision drive successful: Deputy Commissioner felicitates officials

ವಿಜಯನಗರ (ಹೊಸಪೇಟೆ) 28: ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೂವರು ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸನ್ಮಾನಿಸಿದರು.  

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಸಂಬಂಧಿತ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸಿ ಯಶಸ್ವಿಗೊಳಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯವನ್ನು ಜಿಲ್ಲಾಧಿಕಾರಿಗಳು ಶ್ಲಾಘಿಸಿದರು.  

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಸಹಾಯಕ ಆಯುಕ್ತ ವಿವೇಕಾನಂದ, ಚುನಾವಣಾ ತಹಶೀಲ್ದಾರ್ ನೇತ್ರಾವತಿ, ಮತದಾರರ ನೋಂದಣಿ ಅಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.