ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಯುತ್ತಿದೆ: ಜಿಲ್ಲಾಧಿಕಾರಿ
Voter list revision is being conducted transparently: Deputy Commissioner
ಬಳ್ಳಾರಿ, ಜುಲೈ 11: ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಸಹಭಾಗಿತ್ವ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಗಣತಿ ನಮೂನೆಗಳ ವಿತರಣೆ ಕಾರ್ಯ ಪ್ರಗತಿಯಲ್ಲಿದ್ದು, ಈಗಾಗಲೇ ಶೇ. 97ರಷ್ಟು ಕಾರ್ಯ ಪೂರ್ಣಗೊಂಡಿದೆ. ರಾಜಕೀಯ ಪಕ್ಷಗಳು ನೇಮಿಸಿರುವ ಬೂತ್ ಮಟ್ಟದ ಏಜೆಂಟ್ಗಳು (ಬಿಎಲ್ಎ) ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಿಳಿಸಿದರು.
ಗಣತಿ ನಮೂನೆಗಳನ್ನು ಭರ್ತಿ ಮಾಡುವ ವೇಳೆ ಸಾರ್ವಜನಿಕರಲ್ಲಿ ಗೊಂದಲ ಉಂಟಾಗದಂತೆ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ನಮೂನೆಗಳ ಮೊದಲ ಹಾಗೂ ಎರಡನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಬಿಎಲ್ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಎಲ್ಲಾ ರಾಜಕೀಯ ಪಕ್ಷಗಳು ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್. ರೂಬೇರ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಜಿಲ್ಲೆಯ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 