ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವೇಗ
Voter list revision work gains momentum in Ballari Rural constituency
ಬಳ್ಳಾರಿ 15: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಮನೆ-ಮನೆ ಭೇಟಿ ಮೂಲಕ ಮಾಹಿತಿ ಸಂಗ್ರಹಿಸುವ ಕಾರ್ಯ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಚುರುಕಿನಿಂದ ಸಾಗುತ್ತಿದೆ.
ಕ್ಷೇತ್ರದಲ್ಲಿ ಒಟ್ಟು 2,51,325 ಮತದಾರರಿದ್ದು, ಮುದ್ರಿಸಲಾದ ಎಸ್‌ಐಆರ್ ಗಣತಿ ನಮೂನೆಗಳ ಪೈಕಿ 2,50,761 (ಶೇ.99.78) ನಮೂನೆಗಳನ್ನು ಈಗಾಗಲೇ ಯಶಸ್ವಿಯಾಗಿ ವಿತರಿಸಲಾಗಿದೆ. ಅಲ್ಲದೆ, ಕ್ಷೇತ್ರದಲ್ಲಿ ಶೇ.97.21ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ.
ವಿತರಿಸಲಾದ ನಮೂನೆಗಳಲ್ಲಿ 1,00,294 (ಶೇ.39.91) ನಮೂನೆಗಳ ಗಣತೀಕರಣ ಕಾರ್ಯ ಪೂರ್ಣಗೊಂಡಿದ್ದು, ಆನ್ಲೈನ್ ಮೂಲಕ ಮತದಾರರಿಂದ ಸಲ್ಲಿಕೆಯಾಗಿರುವ 432 ನಮೂನೆಗಳೂ ಇದರಲ್ಲಿ ಸೇರಿವೆ.
ವಿವಿಧ ಕಾರಣಗಳಿಂದ 4,673 ಗಣತಿ ನಮೂನೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ. ಇದರಲ್ಲಿ 2,329 ಮಂದಿ ಮೃತಪಟ್ಟ ಮತದಾರರು, 1,850 ಮಂದಿ ಶಾಶ್ವತವಾಗಿ ವಲಸೆ ಹೋದವರು, 463 ಮಂದಿ ಈಗಾಗಲೇ ಹೆಸರು ನೋಂದಾಯಿಸಿಕೊಂಡವರು, 23 ಮಂದಿ ಪತ್ತೆಯಾಗದವರು ಅಥವಾ ಗೈರುಹಾಜರಾಗಿದ್ದವರು ಹಾಗೂ 8 ಮಂದಿ ಇತರ ಕಾರಣಗಳಿಂದ ಒಳಗೊಂಡಿದ್ದಾರೆ.
ಮನೆ-ಮನೆ ಭೇಟಿ ಮೂಲಕ ಗಣತಿ ನಮೂನೆಗಳ ವಿತರಣೆ ಹಾಗೂ ಪರೀಶೀಲನೆ ಕಾರ್ಯ ಜುಲೈ 29ರವರೆಗೆ ನಡೆಯಲಿದೆ. ಅರ್ಹ ಮತದಾರರು ತಮ್ಮ ಮಾಹಿತಿಯನ್ನು ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೀಡಿ ಸಹಕರಿಸುವಂತೆ 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ 