ಮತದಾನ ಜಾಗೃತಿ: ಬೈಕ್ ಜಾಥಾಕ್ಕೆ ಯಶವಂತಕುಮಾರ ಚಾಲನೆ

ಯರಗಟ್ಟಿ 22: ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶನಿವಾರ ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿಯಿಂದ ಸೋಮವಾರ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು. 

ಸುಮಾರು 100 ಬೈಕ್ ಸವಾರರು ಜಾಥಾದಲ್ಲಿ ಭಾಗವಹಿಸಿದ್ದರು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಜಾಥಾ ತಹಶೀಲ್ದಾರ ಕಚೇರಿಯ ವರೆಗೆ ಸಾಗಿ ಬಂತು. 

ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಶವಂತಕುಮಾರ ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು. ಈ ಬಾರಿ ತಾಲೂಕಿನಲ್ಲಿ 6372 ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ. ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು. 

ಪ್ರತಿಯೊಂದು ಗ್ರಾ.ಪಂ, ತಾ.ಪಂ, ಪುರಸಭೆ, ಪಟ್ಟಣ ಪಂಚಾಯತ ಕೇಂದ್ರಗಳಲ್ಲಿ ಮತದಾನ ಜಾಗೃತಿ ಜಾಥಾ ಏರಿ​‍್ಡಸಲಾಗಿದೆ. ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. 

ತಹಶೀಲ್ದಾರರು ಎಸ್‌. ಎಸ್‌. ಇಂಗಳೆ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಡಿ. ಎನ್‌. ತಹಶೀಲ್ದಾರ, ತಾಪಂ ಸಹಾಯಕ ನಿರ್ದೇಶಕರು (ಪಂ.ರಾ) ಆರ್‌. ಎ. ಪಾಟೀಲ 

ತಾಪಂ ವ್ಯವಸ್ಥಾಪಕರು ಜಿ. ಎಸ್‌. ಬಡೆಮ್ಮಿ, ಐಇಸಿ ಸಂಯೋಜಕ ಮಲೀಕಜಾನ ಮೋಮಿನ 

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾಪಂ ಸಿಬ್ಬಂದಿಗಳು, ಗ್ರಾಪಂ ಸಿಬ್ಬಂದಿಗಳು, ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಇದ್ದರು.