ಹೂವಿನ ಹಡಗಲಿ

ಮತದಾನ ಜಾಗೃತಿ ಅಗತ್ಯ: ಶರಣಮ್ಮ

ಮತದಾನ ಜಾಗೃತಿ ಅಗತ್ಯ: ಶರಣಮ್ಮ

ಹೂವಿನ ಹಡಗಲಿ: ಹೊಸ ಮತದಾರರು ನೋಂದಣಿ ಆಗಲುಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ತಹಶೀಲ್ದಾರ್ ಕೆ ಶರಣಮ್ಮ ಹೇಳಿದರು. ಪಟ್ಟಣದ ಜಿಪಿಜಿ ಪ್ರೌಢಶಾಲೆಯಲ್ಲಿ ಬುಧವಾರಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. 

ಮತದಾರರ ನೋಂದಣಿ, ತಿದ್ದುಪಡಿ, ಹೆಸರು ವಿಳಾಸ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಮತದಾನ ಪವಿತ್ರವಾದ ಹಕ್ಕು. ಶಾಲಾ ಕಾಲೇಜುಗಳಲ್ಲಿ ವ್ಯಾಪಕ ಪ್ರಚಾರ ನಡೆಸಿರಿ ಎಂದು ಹೇಳಿದರು.ಪ್ರಜಾಪ್ರಭುತ್ವ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಿರಿ ಎಂದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಜಯರಾಂ ಚೌವ್ಹಾಣ್ ಸಮಾಜದ ಕಲ್ಯಾಣ ಅಧಿಕಾರಿ ಆನಂದ ಡೊಳ್ಳಿನ, ಗ್ರಾಮೀಣ ಕುಡಿಯುವ ನೀರು ವಿಭಾಗದ ಎ ಇ ಇ ಅಂಬೇಡ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಉಪ ಪ್ರಾಂಶುಪಾಲ ಪಿ ಪ್ರಕಾಶ್, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಇತರರು ಉಪಸ್ಥಿತರಿದ್ದರು.ತಾಲೂಕಿನ ವಿವಿಧ ಪ್ರೌಢಶಾಲೆಗಳ ಮತದಾರರ ಸಾಕ್ಷರತಾ ಕ್ಲಬ್ ನ ಸಂಚಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. 


ಸುದ್ದಿ ಓದಿ