ಮತದಾನ ಜಾಗೃತಿ ಕಾರ್ಯಕ್ರಮ

ಹುಬ್ಬಳ್ಳಿ, 7: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕೆಕೆ ಮಾರ್ಟನ  ಎದುರು ಲೋಕಸಭಾ ಸಾರ್ವತ್ರಿಕ ಚುಣಾವಣೆ ನಿಮಿತ್ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ದೇಶದ ಪ್ರಜಾಪ್ರಭುತ್ವವನ್ನು ಸಧೃಡಗೊಳಿಸಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಗೆಳೆಯರನ್ನು, ಕುಟುಂಭದವರನ್ನು ಮತದಾನ ಮಾಡಲು ಪ್ರೇರೇಪಿಸಬೇಕು. ಪ್ರತಿಯೊಬ್ಬರು ಈ ದೇಶದ ಪ್ರಜೆಗಳಾಗಿ ಯಾವುದೇ ಆಮೀಷಗಳಿಗೆ ಒಳಗಾಗದೆ ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಹೇಳಿದರು. ಧಾರವಾಡ ಜಿಲ್ಲೆಯಲ್ಲಿ ಶೇ95 ರಷ್ಟು ಮತದಾನ ಆಗಲಿ ಎಂದು ಆಶಯವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ಹಬ್ಬಕ್ಕೆ ನಾಡಿನ ಜನೆತೆಗೆ ಶುಭ ಕೋರಿದರು. 

ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್‌.ಎಂ.ಸಾತ್ಮಾರ, ನಿವೃತ್ ಗ್ರಂಥಪಾಲಕ ಡಾ. ಬಿ.ಎಸ್‌.ಮಾಳವಾಡ ಅವರು ಮಾತನಾಡಿದರು. ಸುನಂದಾ ಮುಗಭಸ್ತ, ರೋಟರಿ ಸಂಸ್ಥೆಯ ನರೇಂದ್ರ ಬರವಾಲ್, ಡಾ. ನಾಗರಾಜ ಶೆಟ್ಟಿ, ಮೃತ್ಯುಂಜಯ ಮಟ್ಟಿ, ಸೌಮ್ಯ, ಪ್ರೀಯಾ, ಧೀರಜ, ಸಂತೋಷ ಸಿಂಗ್, ಮುಂತಾದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ನೂರಾರು ಮತದಾರರನ್ನು ತಲುಪಲು ಪ್ರಯತ್ನಿಸಲಾಯಿತು.