ಪಾಕಿಸ್ತಾನದಲ್ಲಿ ಮಳೆ ಅನಾಹುತಕ್ಕೆ 10 ಸಾವು
ಇಸ್ಲಾಮಾಬಾದ್, ಜೂನ್ 1: ಪಾಕಿಸ್ತಾನದ ಪೂರ್ವ ಪಂಜಾಬ್ ಪ್ರಾಂತ್ಯದಲ್ಲಿ ಮಳೆ ಮತ್ತು ಮಳೆ ಸಂಬಂಧಿತ ಅನಾಹುತ ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಇತರೆ ಮೂವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿವೆ.ವರದಿಗಳ ಪ್ರಕಾರ, ಪಂಜಾಬ್‌ನ ಓಕಾರಾ ನಗರದ ತಾರಿಕ್ ಅಬಾದ್ ಪ್ರದೇಶದಲ್ಲಿ ಚಾವಣಿ ಕುಸಿದು ಎಂಟು ಜನರು ಸಾವನ್ನಪ್ಪಿದ್ದಾರೆ , ಮೂವರು ಗಾಯಗೊಂಡಿದ್ದಾರೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಶವಗಳನ್ನು ಹೊರ ತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ಕು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದ್ದಾರೆ, ಆದರೆ ಗಾಯಾಳುಗಳ ಗುರುತು ಇನ್ನೂ ಸಹ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.