ರೈತರ ಸಾಲ ಮನ್ನಾ ಮಾಡಿ: ಈರಣ್ಣಗೌಡ ಪಾಟೀಲ ಆಗ್ರಹ
Waive farmers' loans: Irannagouda Patil urges
ಇಂಡಿ, ಜು.15: ಸತತ ಬರಗಾಲದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈರಣ್ಣಗೌಡ ಪಾಟೀಲ ಆಗ್ರಹಿಸಿದರು.
ಈ ಕುರಿತು ಪ್ರಕಟಣೆ ನೀಡಿದ ಅವರು, ಇಂಡಿ ತಾಲೂಕಿನ ರೈತರು ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಸಮರ್ಕ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಅನ್ನದಾತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸುವುದು ಅಗತ್ಯ ಎಂದು ಹೇಳಿದರು.
ರೈತರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಕ್ರಮ ಕೈಗೊಂಡು, ರೈತರ ಬ್ಯಾಂಕ್ ಹಾಗೂ ಇತರ ಸಂಸ್ಥೆಗಳಲ್ಲಿರುವ ಸಾಲವನ್ನು ಮನ್ನಾ ಮಾಡಬೇಕು. ಅಲ್ಲದೆ, ಮಳೆ ಕೊರತೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ಯಾವುದೇ ವಿಳಂಬವಿಲ್ಲದೆ ಸೂಕ್ತ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 