ವಕ್ಫ್ ಬೋರ್ಡ ವಿವಾದ; ರೈತರು ಆತಂಕ ಪಡುವ ಅವಶ್ಯಕತೆ ಇಲ್ಲಾ: ರಾಜು ಕಾಗೆ ಸ್ಪಷ್ಟನೆ
ವಕ್ಫ್ ಬೋರ್ಡ ವಿವಾದ; ರೈತರು ಆತಂಕ ಪಡುವ ಅವಶ್ಯಕತೆ ಇಲ್ಲಾ: ರಾಜು ಕಾಗೆ ಸ್ಪಷ್ಟನೆ..!!
ಕಾಗವಾಡ 3 : ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ರೈತರಿಗೆ ನೀಡಿರುವ ಎಲ್ಲ ನೋಟಿಸ್‌ಗಳನ್ನು ವಾಪಸ್ ಪಡೆಯಲು ಆದೇಶ ಮಾಡಿದ್ದು ಯಾವುದೇ ರೈತರ ಜಮೀನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ. ಆದ್ದರಿಂದ ರೈತರಯ ಆತಂಕ ಪಡುವ ಅವಶ್ಯಕತೆ ಇಲ್ಲವೆಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಅವರು ಶನಿವಾರ ದಿ. 02 ರಂದು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಿಗೆ ನೀಡಿರುವ ನೋಟಿಸ್‌ಗಳನ್ನು ಹಿಂದಕ್ಕೆ ಪಡೆಯಲು ತಿಳಿಸಿದ್ದಾರೆ. ನಾವು ರೈತರ ಪರವಾಗಿದ್ದು ರೈತರ ಜಮೀನುಗಳಳನ್ನು ಕಳೆದುಕೊಳ್ಳಲು ನಾವು ಬಿಡುವುದಿಲ್ಲ. ರೈತರು ಆತಂಕ ಪಡಬಾರದು ಎಂದರು.ಇನ್ನೂ ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು ಅಲ್ಲಿ ಬಣ ರಾಜಕೀಯ ತಾಂಡವಾಡುತ್ತಿದೆ. ಈಗಾಗಲೇ ಬಿಜೆಪಿಯ ಅನೇಕ ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಪ್ರಯತ್ನಿಸುತ್ತಿದ್ದಾರೆಂಬ ಮಾತು ಸತ್ಯವಾಗಿದ್ದು ಕಾಂಗ್ರೆಸ ಸರ್ಕಾರ ಕಳೆದ ಒಂದುವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರ ಮಾಡುತ್ತಿದ್ದು, ನಮ್ಮ ಸರ್ಕಾರಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆಂದು ತಿಳಿಸಿದರು.ಜೊತೆಗೆ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.