ನಗರ ಸಭಾಧ್ಯಕ್ಷ ಪಟೇಲರಿಂದ ವಾರ್ಡ್ ಸಂಚಾರ- ಜನರ ಸಮಸ್ಯೆಗಳಿಗೆ ನೇರ ಸ್ಪಂದನೆ
Ward traffic from City Council Chairman Patel - direct response to people's problems
ನಗರ ಸಭಾಧ್ಯಕ್ಷ ಪಟೇಲರಿಂದ ವಾರ್ಡ್ ಸಂಚಾರ- ಜನರ ಸಮಸ್ಯೆಗಳಿಗೆ ನೇರ ಸ್ಪಂದನೆ
ಕೊಪ್ಪಳ ಸಪ್ಟಂಬರ್ 24, ನಗರದ ಸಾರ್ವಜನಿಕರಿಗೆ ನಗರಸಭೆ ವತಿಯಿಂದ ಕೈಗೊಳ್ಳಲಾಗಿರುವ ಮೂಲಭೂತ ಅಗತ್ಯ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಓಣಿಗಳಲ್ಲಿ ಇರುವ ಸಮಸ್ಯೆಗಳನ್ನು ಆಲಿಸಲು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ವಾರ್ಡ್ ಸಂಚಾರ ಕೈಗೊಂಡಿದ್ದು ನಗರದ 27ನೇ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಬಿಟಿ ಪಾಟೀಲ್ ನಗರ ಬಡಾವಣೆಗೆ ಭೇಟಿ ನೀಡಿ ಜನರಿಂದ ಸಮಸ್ಯೆಗಳನ್ನು ಆಲಿಸಿ ನೇರ ಸ್ಪಂದನೆ ನೀಡಿ ಅದರ ಇತ್ಯರ್ತಕ್ಕಾಗಿ ಅಲ್ಲಿಯ ಉಪಸ್ಥಿತರಿದ್ದ ನಗರಸಭೆಯ ಸಿಬ್ಬಂದಿ ವರ್ಗ ಮತ್ತು ಅಧಿಕಾರಿ ವರ್ಗದವರಿಗೆ ಕಟ್ಟುನಿಟ್ಟಿನ ಸೂಚನೆ ಜಾರಿಗೊಳಿಸಿ ಕೂಡಲೇ ಅವ್ಯವಸ್ಥೆ ಸರಿಪಡಿಸುವಂತೆ ಆದೇಶಿಸಿದರು, ಸಾರ್ವಜನಿಕರ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ,ಸ್ವಚ್ಛತೆ, ವಿದ್ಯುತ್ ದೀಪ, ಚರಂಡಿಗಳ ಸ್ವಚ್ಛತೆ, ಇತರ ವಿಷಯಗಳ ಬಗ್ಗೆ ಸಾರ್ವಜನಿಕರು ಅಧ್ಯಕ್ಷರ ಗಮನ ಸೆಳೆದಾಗ ಅವರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ ಅವರ ಬೇಕು ಬೇಡಿಕೆಗಳ ಈಡೇರಿಕೆಗಾಗಿ ನಗರಸಭೆ ವತಿಯಿಂದ ಕೈಗೊಳ್ಳಬಹುದಾದ ಎಲ್ಲಾ ಕಾರ್ಯಗಳನ್ನು ಕೂಡಲೇ ನಿರ್ವಹಿಸಲಾಗುವುದು ಎಂದು ಜನರಿಗೆ ಅವರು ಭರವಸೆ ನೀಡಿದರು, ಅವರೊಂದಿಗೆ ನಗರಸಭೆಯ ವಾರ್ಡಿನ ಸದಸ್ಯರು ಮಾಜಿ ಅಧ್ಯಕ್ಷರು ನಗರಸಭೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 