ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಕಾರವಾರ 08: ಹವಾಮಾನ ಇಲಾಖೆಯು ಜುಲೈ 15ರ ವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸೂಚನೆ ನೀಡಿದ್ದು, ಸಾರ್ವಜನಿಕರು, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಬಳಿ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಸಾರ್ವಜನಿಕರು ಆಶ್ರಯ ಪಡೆಯಬೇಕು. ಪ್ರಕೃತಿ ವಿಕೋಪಕ್ಕೆ ಸಂಬಂಧಿತ ಯಾವುದೇ ತುರ್ತು ಸೇವೆಗೆಗಾಗಿ 1077 ಹಾಗೂ ವ್ಯಾಟ್ಸಮ್ ನಂ 9483511015 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.