ರಸ್ತೆ ಕಾಮಗಾರಿ ವಿಳಂಬ ನೀತಿ ಖಂಡಿಸಿ ಪ್ರತಿಭಟನೆಯ ಎಚ್ಚರಿಕೆ
ಲಕ್ಷ್ಮೇಶ್ವರ 04: ತಾಲೂಕಿನ ಸೂರುಣಗಿ ಗ್ರಾಮದಿಂದ ಬಾಲೆಹೊಸೂರು ಗ್ರಾಮದವರೆಗೂ ಸಂಪೂರ್ಣವಾಗಿ ಹದಗಟ್ಟಿರುವ ರಸ್ತೆ ಅಭಿವೃದ್ಧಿ ಪಡಿಸುವಂತೆ ಹಲವಾರು ಸಂಘಟನೆಗಳು ಮತ್ತು ಗ್ರಾಮಸ್ಥರು ನಿರಂತರ ಹೋರಾಟದ ಫಲವಾಗಿ ಸರ್ಕಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಏಳು ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಗ್ರಾಮಸ್ಥರಲ್ಲಿ ಸಂತೋಷವನ್ನುಂಟು ಮಾಡಿದೆ ಆದರೆ ರಸ್ತೆ ಕಾಮಗಾರಿ ಪ್ರಾರಂಭಿಸಬೇಕಾದ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ರಸ್ತೆ ಕಾಮಗಾರಿ ಪ್ರಾರಂಭಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ ಸಂಘಟನೆಯ ಮುಖಂಡರು ಇದರಿಂದ ರಸ್ತೆ ಕಾಮಗಾರಿ ಯಲ್ಲಿ ರಸ್ತೆ ಆಗಿದ್ದು ಜಲ್ಲಿಕಲ್ಲು ಹರಡಿ ಕೈಬಿಟ್ಟಿದ್ದಾರೆ ಇದರಿಂದ ಸಾರ್ವಜನಿಕರು ಪ್ರಯಾಣಿಕರು ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ಇದನ್ನು ತೀವ್ರವಾಗಿ ಖಂಡಿಸಿರುವ ಸಂಘಟನಾಕಾರರು ಇನ್ನು ಒಂದು ವಾರದ ಒಳಗೆ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳದೆ ಇದ್ದರೆ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಜಯ ಕರ್ನಾಟಕ ಸಂಘಟನೆಯ ಶಿರಹಟ್ಟಿ ಲಕ್ಷ್ಮೇಶ್ವರ ತಾಲೂಕು ಉಸ್ತುವಾರಿ ರಮೇಶ ಹಂಗನಕಟ್ಟಿ ಬಸಣ್ಣ ಮೇಲ್ಮುರಿ, ಪೀರಸಾಬ್ ರಿತ್ತಿ, ಬಸವರಾಜ್ ಕಾರ್ಕೋಳ, ತನ್ವೀರ ರಿತ್ತಿ, ಮಂಜುನಾಥ್ ಅವರು ಒತ್ತಾಯಿಸಿದ್ದಾರೆ.