ಬೆಳಗಾವಿ

ಸಮಸ್ಯೆ ಬಗೆಹರಿಸದಿದ್ದರೆ ಮಹಾರಾಷ್ಟ್ರ ಸೇರೆ​‍್ಡಗೆ ಮನವಿ ಸಲ್ಲಿಸುವ ಎಚ್ಚರಿಕೆ

ಸಮಸ್ಯೆ ಬಗೆಹರಿಸದಿದ್ದರೆ ಮಹಾರಾಷ್ಟ್ರ ಸೇರೆ​‍್ಡಗೆ ಮನವಿ ಸಲ್ಲಿಸುವ ಎಚ್ಚರಿಕೆ

ಗಡಿ ಭಾಗದ ರಸ್ತೆ ಅಭಿವೃದ್ಧಿಗೆ ಆಗ್ರಹ   

ಸಂಬರಗಿ, ಆ. 3: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ರಸ್ತೆ ಅಭಿವೃದ್ಧಿ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಆರೋಪಿಸಿ, ಸರ್ಕಾರ ತಕ್ಷಣ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸೈನಿಕ ಹಾಗೂ ರೈತ ಹೋರಾಟಗಾರ ಸಚಿನ್ ಪಾಟೀಲ ಆಗ್ರಹಿಸಿದರು.  

ಭಾನುವಾರ  ಪಾಂಡೇಗಾಂವ್‌-ಕೊಂಗನೋಳಿ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ನಡೆಸಿದ ಮೌನ ಪ್ರತಿಭಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ರಸ್ತೆ ದುರಸ್ತಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  

ಗಡಿ ಭಾಗದ ಜನರು ಮೂಲಸೌಕರ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ರಸ್ತೆಗಳ ದುಸ್ಥಿತಿಯಿಂದ ತುರ್ತು ವೈದ್ಯಕೀಯ ಸೇವೆಗಳಿಗೂ ತೊಂದರೆಯಾಗುತ್ತಿದೆ. ಆಂಬ್ಯುಲೆನ್ಸ್‌ ಸಂಚಾರವೂ ಕಷ್ಟಕರವಾಗಿದ್ದು, ರೋಗಿಗಳ ಜೀವಕ್ಕೂ ಅಪಾಯ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.  

ಗಡಿ ಪ್ರದೇಶದ ಅಭಿವೃದ್ಧಿಯನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಗಡಿ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದಿದ್ದರೆ, ತಮ್ಮ ಗ್ರಾಮವನ್ನು ಮಹಾರಾಷ್ಟ್ರಕ್ಕೆ ಸೇರೆ​‍್ಡಗೊಳಿಸುವಂತೆ ಮನವಿ ಸಲ್ಲಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಸಿದರು. 

ಪಾಂಡೇಗಾಂವ್ ಹಿ ಚಾಬುಕ್ಸಾ-್ವರವಾಡಿ ರಸ್ತೆ ಕಾಮಗಾರಿಗೆ ಒಂದು ವರ್ಷದ ಹಿಂದೆಯೇ ಅನುಮೋದನೆ ದೊರೆತಿದ್ದರೂ, ಇದುವರೆಗೆ ಯಾವುದೇ ಕಾಮಗಾರಿ ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರಸ್ತೆ ಕಾಮಗಾರಿ ತಕ್ಷಣ ಆರಂಭಿಸಬೇಕು.

ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  ಪ್ರತಿಭಟನೆಯಲ್ಲಿ ಕಾಕಾಸಾಹೇಬ್ ಪಾಟೀಲ, ಸಾಗರ ಪಾಟೀಲ, ಶ್ರೀಮಂತ ಪಾಟೀಲ ಸೇರಿದಂತೆ ಹಲವರು ಭಾಗವಹಿಸಿದ್ದರು. 


ಸುದ್ದಿ ಓದಿ