ಬೆಳಗಾವಿ

ಜಲ-ಮಣ್ಣು ಸಂರಕ್ಷಣೆ ಪ್ರತಿಯೊಬ್ಬರ ಹೊಣೆ

ಜಲ-ಮಣ್ಣು ಸಂರಕ್ಷಣೆ ಪ್ರತಿಯೊಬ್ಬರ ಹೊಣೆ

ಲೋಕದರ್ಶನ ವರದಿ 

  

ಜಲ-ಮಣ್ಣು ಸಂರಕ್ಷಣೆ ಪ್ರತಿಯೊಬ್ಬರ ಹೊಣೆ  

ಶಿರಸಿ 11: ಸಮಗ್ರ ಜಲ ಮತ್ತು ನೆಲ ನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಧಾರವಾಡದ ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆ (ವಾಲ್ಮಿ) ವತಿಯಿಂದ ಶಿರಸಿ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಒಂದು ದಿನದ ಕಾರ್ಯಾಗಾರ ನಡೆಯಿತು.  

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಂ.ಎಚ್‌. ತಟಗಾರ, ಸುಸ್ಥಿರ ಭವಿಷ್ಯಕ್ಕಾಗಿ ನೀರು ಮತ್ತು ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬ ವಿದ್ಯಾರ್ಥಿಯ ಆದ್ಯ ಕರ್ತವ್ಯವಾಗಬೇಕು. ಮಳೆನೀರಿನ ಮಹತ್ವ ಅರಿತು ಜಲ ಹಾಗೂ ಮಣ್ಣಿನ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಮುಂಚೂಣಿಯಲ್ಲಿ ಇರಬೇಕು ಎಂದರು.  

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ವಾಲ್ಮಿ, ಧಾರವಾಡದ ನಿರ್ದೇಶಕ ಡಾ. ಗೀರೀಶ್ ಎನ್‌. ಮರಡಿ ಮಾತನಾಡಿ, ಮಣ್ಣು ಸಸ್ಯಗಳ ಬೆಳವಣಿಗೆಗೆ ಆಧಾರವಾಗಿದ್ದು, ಆರೋಗ್ಯಕರ ಮಣ್ಣು ಉತ್ತಮ ಆಹಾರ ಉತ್ಪಾದನೆಗೆ ಅಗತ್ಯವಾಗಿದೆ. ನೀರು ಮತ್ತು ಮಣ್ಣು ಅಮೂಲ್ಯ ನೈಸರ್ಗಿಕ ಸಂಪನ್ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಮಣ್ಣಿನ ಆರೋಗ್ಯ, ನೀರು, ಮಣ್ಣು ಹಾಗೂ ಅರಣ್ಯ ಸಂರಕ್ಷಣೆ ಮತ್ತು ಮಳೆನೀರು ಕೊಯ್ಲಿನ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.   ಉಳಿಸಿ, ಭವಿಷ್ಯ ಉಳಿಸಿ’ ಎಂಬ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಸಮಗ್ರ ಕೃಷಿ ಪದ್ಧತಿ ಹಾಗೂ ಮಣ್ಣಿನ ಆರೋಗ್ಯ ನಿರ್ವಹಣೆ ಕುರಿತು ಸಹಾಯಕ ಪ್ರಾಧ್ಯಾಪಕ ಇಂದೂಧರ ಹಿರೇಮಠ ಉಪನ್ಯಾಸ ನೀಡಿದರು.  

ವಾಲ್ಮಿಯ ಸಲಹೆಗಾರ ಫಕೀರೇಶ ಅಗಡಿ ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ಸ್ವಾಗತಿಸಿ ವಂದನಾರೆ​‍್ಣ ಮಾಡಿದರು. ಕಾರ್ಯಾಗಾರದಲ್ಲಿ ಅರಣ್ಯ ಮಹಾವಿದ್ಯಾಲಯ, ಶಿರಸಿಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. 


ಸುದ್ದಿ ಓದಿ