ಕೆರೆ-ಡ್ಯಾಂಗಳ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ: ಗೌರವ್ ಗುಪ್ತಾ
Water from lakes and dams to be used solely for drinking purposes: Gaurav Gupta
ಲೋಕದರ್ಶನ ವರದಿ
ಗದಗ, ಜು.14: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ, ಕೆರೆ, ಜಲಾಶಯ ಹಾಗೂ ಡ್ಯಾಂಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ನೀರು ಮತ್ತು ಜನಜೀವನಕ್ಕೆ ಅಗತ್ಯವಾದ ದೈನಂದಿನ ಬಳಕೆಗೆ ಮಾತ್ರ ಮೀಸಲಿಡುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರುದಿಂದ ವಿಡಿಯೊ ಸಂವಾದದ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನೀರಿನ ಲಭ್ಯತೆ, ಜಲಾಶಯಗಳ ನೀರಿನ ಮಟ್ಟ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಮಗ್ರ ಪರೀಶೀಲನೆ ನಡೆಸಿದರು.
ರಾಜ್ಯ ಸರ್ಕಾರದ ಆದ್ಯತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ಆದ್ದರಿಂದ ಕೆರೆ, ಡ್ಯಾಂ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು. ಕೃಷಿ, ಲಿಫ್ಟ್ ಇರಿಗೇಷನ್, ವಾಹನ ತೊಳೆಯುವುದು, ಕೈಗಾರಿಕಾ ಬಳಕೆ ಸೇರಿದಂತೆ ಅನಿವಾರ್ಯವಲ್ಲದ ಉದ್ದೇಶಗಳಿಗೆ ನೀರಿನ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು. ಕೆರೆ ಹಾಗೂ ಜಲಾಶಯಗಳಿಂದ ಅನಧಿಕೃತವಾಗಿ ನೀರು ಎತ್ತುತ್ತಿರುವ ಪಂಪ್ಸೆಟ್ಗಳನ್ನು ತಕ್ಷಣ ತೆರವುಗೊಳಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಯಾವುದೇ ಭಾಗದಲ್ಲಿ ಲಿಫ್ಟ್ ಇರಿಗೇಷನ್ಗೆ ಜಿಲ್ಲಾಧಿಕಾರಿಗಳು ಅನುಮತಿ ನೀಡಬಾರದು ಎಂದೂ ನಿರ್ದೇಶಿಸಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 