ಗೋಕಾಕ್

ಘಟಪ್ರಭಾ ನದಿಗೆ ನೀರು ಬಿಡುಗಡೆ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಗ್ರಾಮಸ್ಥರಿಗೆ ಸೂಚನೆ

ಘಟಪ್ರಭಾ ನದಿಗೆ ನೀರು ಬಿಡುಗಡೆ:  ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಗ್ರಾಮಸ್ಥರಿಗೆ ಸೂಚನೆ

ಬೆಳಗಾವಿ ಜುಲೈ.24: ಹಿಡಕಲ್ (ಘಟಪ್ರಭಾ) ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಆಗುತ್ತಿರುವ ಕಾರಣ ಹಿಡಕಲ್ ಜಲಾಶಯಕ್ಕೆ ಬಾರಿ ಪ್ರಮಾಣದಲ್ಲಿ ನೀರಿನ ಒಳಹರಿವು ಹರಿದು ಬರುತ್ತಿದೆ. ಇದರಿಂದ ಹಿಡಕಲ್ ಜಲಾಶಯವು ಶೇಕಡಾ 84.75 ರಷ್ಟು ಭರ್ತಿಯಾಗಿದ್ದು, ಜಲಾಶಯಕ್ಕೆ ಬರುವ ನೀರಿನ ಪ್ರಮಾಣ ಗಣನೀಯವಾಗಿ ಏರತೊಡಗಿದೆ. ಜಲಾಶಯದ ಗರಿಷ್ಠ ಮಟ್ಟ 2175.00 ಅಡಿಗಳಿರುತ್ತದೆ. 

ಜಲಾಶಯಕ್ಕೆ ಒಳಹರಿವಿನ ಪ್ರಮಾಣ 31153 ಕ್ಯೂಸೆಕ್ಸ್‌ ಇರುವುದರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಯಾವುದೇ ಕ್ಷಣದಲ್ಲಾದರೂ ಹೆಚ್ಚುವರಿ ನೀರನ್ನು ಕ್ರೆಸ್ಟ್‌ ಮೂಲಕ ನದಿ ಪಾತ್ರಕ್ಕೆ ಬಿಡಲಾಗುವುದು.  

ಆದ್ದರಿಂದ ಘಟಪ್ರಭಾ ನದಿ ಹಾಗೂ ಹಿರಣ್ಯಕೇಶಿ ನದಿಯ ದಡದಲ್ಲಿ ಬರುವ ಎಲ್ಲ ಗ್ರಾಮಗಳ ಗ್ರಾಮಸ್ಥರು ತಮ್ಮ ಜಾನುವಾರುಗಳ ಸಮೇತ ನದಿಯ ಪಾತ್ರದಿಂದ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಪರ ಜಿಲ್ಲಾಧಿಕಾರಿಗಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ