ಕರವಳ್ಳಿ ಗ್ರಾಮಕ್ಕೆ ನೀರು ಪೂರೈಕೆ: ಪತ್ರಿಕೆಯ ವರದಿಗೆ ಸ್ಪಂದಿಸಿದ ಅಧಿಕಾರಿಗಳು
Water supply to Karavalli village: Officials respond to newspaper report
ಲೋಕದರ್ಶನ ವರದಿ
ಮುಂಡಗೋಡ 15: ತಾಲೂಕಿನ ಕರವಳ್ಳಿ ಗ್ರಾಮದಲ್ಲಿ ತೀವ್ರಗೊಂಡಿದ್ದ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಿದ್ದು, ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.ಗ್ರಾಮದಲ್ಲಿ ಉಂಟಾಗಿದ್ದ ನೀರಿನ ಹಾಹಾಕಾರದ ಕುರಿತು ಲೋಕದರ್ಶನ ಪತ್ರಿಕೆಯಲ್ಲಿ ‘ಕರವಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಟಿ.ವೈ. ದಾಸನ ಕೊಪ್ಪ ಅವರು ವಿಶೇಷ ಮುತುವರ್ಜಿ ವಹಿಸಿ ಗ್ರಾಮಕ್ಕೆ ಎರಡು ದಿನಕೊಮ್ಮೆ ತುರ್ತಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಿಸಿದ್ದಾರೆ. ಇದರಿಂದ ಹಲವು ದಿನಗಳಿಂದ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮಸ್ಥರಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಗ್ರಾಮದ ಸಮಸ್ಯೆಯನ್ನು ಬೆಳಕಿಗೆ ತಂದ ಪತ್ರಿಕೆ ಹಾಗೂ ವರದಿಗಾರರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 