ತಾಳಿಕೋಟಿ

ಹಿರಿಯ ವಿದ್ಯಾರ್ಥಿಗಳಿಂದ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ಹಿರಿಯ ವಿದ್ಯಾರ್ಥಿಗಳಿಂದ ಶಾಲೆಗೆ ನೀರಿನ ಟ್ಯಾಂಕ್ ಕೊಡುಗೆ

ತಾಳಿಕೋಟಿ 23:  ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಈ ಶಾಲೆಯ 1997-98 ಸಾಲಿನ ಹಿರಿಯ ವಿದ್ಯಾರ್ಥಿಗಳು ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಸಲುವಾಗಿ ನೀರಿನ ಟ್ಯಾಂಕ್ ಕೊಡುಗೆ ನೀಡಿದರು. ಇಲಾಖೆಯ ಪರವಾಗಿ ಮುದ್ದೇಬಿಹಾಳ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಆರ್ ಬಿ ದಮ್ಮೂರಮಠ ಅವರು ಉದ್ಘಾಟಿಸಿ ಹಿರಿಯ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಮಯದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಡಾ. ಅನಿತಾ ಸಜ್ಜನ್ ಅವರನ್ನು ಒಳಗೊಂಡು ಹಿರಿಯ ವಿದ್ಯಾರ್ಥಿಗಳು,ಶಿಕ್ಷಣ ಸಂಯೋಜಕರು, ಬಿ ಆರ್ ಪಿ, ಹಾಗೂ ಸಿ ಆರ್ ಪಿ, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. 


ಸುದ್ದಿ ಓದಿ