ಅಗತ್ಯತೆ ಆಧರಿಸಿ ಟ್ಯಾಂಕರ್ ನೀರು ಪೂರೈಸಿ
ಬೆಳಗಾವಿ, 01: ಕುಡಿಯುವ ನೀರಿನ ಬೇಡಿಕೆ ಆಧರಿಸಿ ಸಮಸ್ಯಾತ್ಮಕ ಗ್ರಾಮಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.
ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕೋಡಿ ವಿಭಾಗದಲ್ಲಿ 131 ಹಾಗೂ ಬೆಳಗಾವಿ ವಿಭಾಗದಲ್ಲಿ 39 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದ್ದು, ಇವುಗಳ ಪೈಕಿ 26 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಬರ ಹಿನ್ನೆಲೆಯಲ್ಲಿ ಈ ಮುಂಚೆ ಕೊರೆಯಲಾಗಿರುವ ಕೊಳವೆಬಾವಿಗಳನ್ನು ಪರಿಶೀಲಿಸಿ ತಹಶಿಲ್ದಾರರ ಮೂಲಕ ವರದಿಯನ್ನು ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಅದೇ ರೀತಿ ಅಗತ್ಯ ಇರುವ ಕಡೆಗಳಲ್ಲಿ ಮಾತ್ರ ತಕ್ಷಣ ಮೇವು ಬ್ಯಾಂಕ್ ಆರಂಭಿಸುವಂತೆ ಸೂಚನೆ ನೀಡಿದ ಪ್ರಾದೇಶಿಕ ಆಯುಕ್ತರು, ಮೇವು ಖರೀದಿಯಲ್ಲಿ ಮಿತವ್ಯಯ ನೀತಿ ಪಾಲಿಸುವಂತೆ ತಿಳಿಸಿದರು.
ಈಗಾಗಲೇ ಅಥಣಿಯಲ್ಲಿ ಮಾತ್ರ ಮೇವು ಬ್ಯಾಂಕ್ ಆರಂಭಿಸಲಾಗಿದ್ದು, ಮುಂದಿನ ಎರಡು ತಿಂಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಜಿಲ್ಲೆಯಲ್ಲಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿದರ್ೇಶಕ ಡಿ.ಎಸ್. ಹವಾಲ್ದಾರ ಸಭೆಯಲ್ಲಿ ತಿಳಿಸಿದರು.
ಬೆಳೆಹಾನಿ ಬಗ್ಗೆ ಚಚರ್ೆ:
ಕಳೆದ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆಹಾನಿಯಾಗಿರುವ ಬಗ್ಗೆ ಚಚರ್ೆ ನಡೆಸಿದ ತುಷಾರ್ ಗಿರಿನಾಥ್ ಅವರು, ಕೇಂದ್ರ ಬರ ಅಧ್ಯಯನ ತಂಡಗಳ ವರದಿ ಆಧರಿಸಿ ಕೇಂದ್ರ ಸಕರ್ಾರ ಈಗಾಗಲೇ ಮೊದಲ ಕಂತಿನಲ್ಲಿ ಹಣ ಬಿಡುಗಡೆಗೊಳಿಸಿದೆ ಎಂದರು.
ಮುಂಗಾರು ಹಂಗಾಮಿನಲ್ಲಿ ಆಗಿರುವ ಬೆಳೆಹಾನಿಗೆ 58.49 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿ ಬಿಡುಗಡೆಗೆ ಮಾಡುವಂತೆ ಕೇಳಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿದರ್ೇಶಕ ಜಿಲಾನಿ ಮೊಖಾಶಿ ವಿವರಿಸಿದರು.
ಪಟ್ಟಣ ಪ್ರದೇಶಗಳಿಗೆ ನೀರು ಸರಬರಾಜಿಗಾಗಿ
ಕೈಗೆತ್ತಿಕೊಂಡಂತಹ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ನಿಗದಿಪಡಿಸಲಾದ ಗುರಿಯನ್ನು ತಲುಪುವ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಅವರು ನಿದರ್ೇಶನ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಇಬ್ರಾಹಿಂ ಮೈಗೂರ್, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ವಿಜಯಕುಮಾರ್ ಹೊನಕೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 