ನಮಗೆ ವಿದ್ಯುನ್ಮಾನ ಮತಯಂತ್ರಗಳ ಮೇಲೆ ನಂಬಿಕೆ ಇಲ್ಲ, ನಮಗೆ ಇವಿಎಂ ಬೇಡ: ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ
ನವದೆಹಲಿ 26: ನಮಗೆ ವಿದ್ಯುನ್ಮಾನ ಮತಯಂತ್ರಗಳ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲಿ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.
ದೆಹಲಿ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಪಕ್ಷದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ, ನಮಗೆ ಇವಿಎಂ ಮೂಲಕ ಚುನಾವಣೆ ಬೇಡ. ನಾವು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಯನ್ನು ಬಯಸುತ್ತೇವೆ. ನಾವು 'ಭಾರತ್ ಜೋಡೋ ಯಾತ್ರೆ' ನಡೆಸಿದಂತೆಯೇ, ನಾವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಾಗಿ ರಾಷ್ಟ್ರವ್ಯಾಪಿ ಪ್ರಚಾರವನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.
ಮತಯಂತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಸಾಂಪ್ರದಾಯಿಕ ವಿಧಾನಕ್ಕೆ ಮರಳುವಂತೆ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದರು.
ಖರ್ಗೆ ಯವರ ಈ ಹೇಳಿಕೆಗೆ ಕಟುವಾಗಿ ಟೀಕಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಕಾಂಗ್ರೆಸ್ ಅಧ್ಯಕ್ಷರು ಸುಪ್ರೀಂ ಕೋರ್ಟ್ ಆದೇಶಕ್ಕೆ ಅಗೌರವ ತೋರಿದ್ದಾರೆ, ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಾಗ (ಕರ್ನಾಟಕ, ಜಮ್ಮು-ಕಾಶ್ಮೀರ, ತೆಲಂಗಾಣ, ವಯನಾಡು, ಹಿಮಾಚಲ ಪ್ರದೇಶ, ಜಾರ್ಖಂಡ್‌ನಲ್ಲಿ) ಖರ್ಗೆ ಅವರಿಗೆ ಚುನಾವಣಾ ಆಯೋಗ ಮತ್ತು ಇವಿಎಂಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಬಿಜೆಪಿ ಗೆದ್ದರೆ ಇವಿಎಂಗಳು ಸರಿ ಇರಲ್ಲ. ತಮ್ಮ ಸೋಲನ್ನು ಕಾಂಗ್ರೆಸ್ಸಿಗರು ಪಕ್ಷ ಸಂವಿಧಾನ ಮತ್ತು ಇವಿಎಂಗಳ ಮೇಲೆ ದೂಷಿಸಲು ಪ್ರಯತ್ನಿಸುತ್ತಾರೆ ಎಂದು ಟೀಕಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 