ವಿಜಯಪುರ ಜು. 2: ಕಳೆದ ಸಾಲಿನಲ್ಲಿ ಪ್ರವಾಹವನ್ನು ಎದುರಿಸಿರುವುದರಿಂದ ಈ ಬಾರಿಯೂ ಮುನ್ನೆಚ್ಚರಿಕೆಯಾಗಿ ಮುಳುಗಡೆಯಾಗಬಹುದಾದ ಪ್ರದೇಶಗಳನ್ನು ಗುರುತಿಸಿಕೊಂಡು ಅಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರನ್ನು ಮುಂಚಿತವಾಗಿಯೇ ತೆರವುಗೊಳಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇನ್ನೂ ಅದೇ ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ತಿಳಿಹೇಳುವ ಕಾರ್ಯ ಆಗಬೇಕು ಎಂದು ಸಂಬಂಧಪಟ್ಟ ತಾಲೂಕಾ ಅಧಿಕಾರಿಗಳಿಗೆ ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚಿಸಿದರು.
ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ತಾಲೂಕಾ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣೆ ಹಾಗೂ ಮುನ್ನೆಚ್ಚರಿಕಾ ಕ್ರಮ ಹಾಗೂ ಪೂರ್ವ ಯೋಜನೆ (ಪ್ರೀ ಪ್ಲಾನ್) ಕುರಿತ ಸಭೆಯಲ್ಲಿ ಮಾತನಾಡಿದ ಅವರು ವಿಜಯಪು, ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿಗೆ ಸಂಬಧಿಸಿದಂತೆ ಕೃಷ್ಣಾ ನದಿ ತೀರದ 14 ಹಳ್ಳಿಗಳನ್ನು ಗುರುತಿಸಲಾಗಿದ್ದು, ಸ್ಥಳಾಂತರ ಕೂಡಾ ಮಾಡಲಾಗಿದೆ ಇನ್ನೂ ಕೆಲವು ಹಳ್ಳಿಗಳ ಜನರು ಅಲ್ಲೇ ನೆಲೆಸಿದ್ದು, ಅವರು ಸ್ಥಳಾಂತರ ಮಆಡಲಾದ ಪ್ರದೇಶಕ್ಕೆ ಹೋಗುವಂತೆ ತಿಳಿಹೇಳುವ ಕಾರ್ಯ ವಾಗಬೇಕು. ಇದರ ಜೊತೆಗೆ ಮುಳುಗಡೆಯಾಗುವ ಪ್ರದೇಶಗಳ ಮೇಲೆ ನಿಗಾ ಇಟ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿಪತ್ತು ನಿರ್ವಹಣೆ ಹಾಗೂ ಮುನ್ನೆಚ್ಚರಿಕೆಯಾಗಿ ನಾವೆಲ್ಲರು ಯುದ್ದೂಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದ್ದು, ಮಾನ್ಯ ಜಿಲ್ಲಾಧಿಕಾರಿಗಳ ಆಧೇಶದಂತೆ ಈ ನಿಟ್ಟಿನಲ್ಲಿ ಪ್ರತಿ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ವಿಪತ್ತು ನಿರ್ವಹಣೆ ಹಾಗೂ ಮುನ್ನೆಚ್ಚರಿಕೆ ಕುರಿತು ಪೂರ್ವ ಯೋಜನೆ ಸಿದ್ದಪಡಿಸಿ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯಿಂದ ತಾಲೂಕಾವಾರು ಪ್ರವಾಹ ಮುನ್ನೆಚ್ಚರಿಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಕೃಷಿ ತೋಟಗಾರಿಕೆ ಇಲಾಖೆಯವರು ಪ್ರತಿದಿನ ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿದಿನದ ಮಳೆಯ ವರದಿ ಪ್ರಕೃತಿ ವಿಕೋಪದಿಂದ ಉಂಟಾಗುವ ಮಾನವ ಜಾನುವಾರು, ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿ ಮತ್ತು ಮಳೆಗೆ ಬಿದ್ದಿರುವ ಮನೆಗಳ ವರದಿಯನ್ನು ಪ್ರತಿದಿನ ಸಲ್ಲಿಸಬೇಕು. ಪ್ರತಿ ಹಳ್ಳಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದಶರ್ಿಗಳು ತಮ್ಮ ತಮ್ಮ ಸಮಾಜದಲ್ಲಿದ್ದು ಅತೀವೃಷ್ಟಿ ಬಗ್ಗೆ ಯಾವುದೇ ತೊಂದರೆಯಾಗುವ ಸಂಭವಿದ್ದಲ್ಲಿ ಆ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆಯನ್ನೂ ನೀಡಬೇಕು ಎಂದು ಹೇಳಿದರು.
ಸ್ಥಳೀಯ ಮಟ್ಟದ ಸಂಘ, ಸಂಸ್ಥೆಗಳು ಮಳೆಯಿಂದಾಗಿ ಏನಾದರೂ ತೊಂದರೆಗಳು ಸಂಭವಿಸುವ ಪ್ರಸಂಗ ಕಂಡುಬಂದಲ್ಲಿ ಜನರನ್ನು ಎತ್ತರದ ಸ್ಥಳಕ್ಕೆ ಸಾಗಿಸಲು ಹಾಗೂ ಸಮುದಾಯ ಭವನ, ದೊಡ್ಡ ಕಟ್ಟಡಗಳನ್ನು ಗುರುತಿಸಿ ಇಟ್ಟುಕೊಂಡಿರಬೇಕು. ಹಾಗೂ ಸಂತ್ರಸ್ತರಿಗೆ ಗಂಜಿಕೇಂದ್ರ ತೆರೆಯಲು ಹಾಗೂ ಅಡುಗೆ ಸಾಮಾನುಗಳ ವ್ಯವಸ್ಥೆಯನ್ನು ಮಾಡಿಕೊಡಬೇಕು. ಬಿಸಿಯೂಟದ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಈಗಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ವಿಜಯಪುರ, ಬಬಲೇಶ್ವರ ಹಾಗೂ ತಿಕೋಟಾ ಈ ಮೂರು ತಾಲೂಕುಗಳಲ್ಲಿ ಕಂಟ್ರೋಲ್ ರೂಮ್ ತೆರೆದು 24*7 ಗಂಟೆಗಳ ಕಾಲ ಸಹಾಯವಾಣಿಯನ್ನು ಪ್ರಾರಂಭಿಸಿ ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಪ್ರತಿದಿನದ ಮಳೆಯ ಬಗ್ಗೆ ವರದಿಯನ್ನು ಹಾಗೂ ಮಳೆಯ ಮಾಪನವನ್ನು ಮಳೆ ಮಾಪನ ಕೇಂದ್ರದಿಂದ ವರದಿಯನ್ನು ಬೆಳಿಗ್ಗೆ 11 ಗಂಟೆಯ ಒಳಗಾಗಿ ಸಲ್ಲಿಸಬೇಕು ಎಂದರು.
ಅಗ್ನಿ ಶಾಮಕ ಇಲಾಖೆಯವರು ನದಿಗಳಲ್ಲಿ ನೀರು ಏರಿಬಂದಲ್ಲಿ ನದಿ ತೀರದ ಹಳ್ಳಿಯ ಜನರ ಸಂರಕ್ಷಣೆಗೆ ಬೋಟುಗಳ ಅವಶ್ಯಕತೆಯ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಹೋಮ್ಗಾಡರ್್ ಸಿಬ್ಬಂದಿಗಳನ್ನು ಸಂಪರ್ಕದಲ್ಲಿಟ್ಟುಕೊಂಡು ಜನರ ಸಂರಕ್ಷಣೆಗೆ ನಿಲ್ಲಬೇಕು. ಆರೋಗ್ಯ ಇಲಾಖೆ ಜನಸಾಮಾನ್ಯರಿಗೆ ಔಷಧಿಗಳ ದಾಸ್ತಾನು ಕುರಿತು ಸಕರ್ಾರಿ ಆಸ್ಪತ್ರೆಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಸಂಗ್ರಹವಿದೆಯೋ ಎನ್ನುವ ಬಗ್ಗೆ ನೋಡಿಕೊಳ್ಳಬೇಕು. ದನಕರುಗಳಿಗೆ ಮೇವು, ಔಷಧಿಗಳ ವ್ಯವಸ್ಥೆ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾವು ಇನ್ನಿತರ ವಿಷ ಜಂತುಗಳ ಕಡಿತದಿಂದ ತೊಂದರೆಗಳಾಗುವ ಜನರಿಗೆ ಸೂಕ್ತ ಔಷದೋಪಚಾರ ನೀಡಲು ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ವಿಜಯಪುರ ತಹಶಿಲ್ದಾರ ಮೋಹನಕುಮಾರಿ, ಸಿ.ಪಿ.ಓ ಎಂ.ಕೆ ನಿಂಗಪ್ಪ, ಬಬಲೇಶ್ವರ ತಾಲೂಕಿನ ನೋಡೆಲ್ ಅಧಿಕಾರಿ ರಮೇಶ ಮೇಸ್ತ್ರಿ, ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಹಾಗೂ ತಿಕೋಟಾ ನೋಡೆಲ್ ಅಧಿಕಾರಿ ಲೋಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.