ಸಮಾಜಕ್ಕೆ ನಾವು ಏನು ಕೊಟ್ಟಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು

ಸಮಾಜಕ್ಕೆ ನಾವು ಏನು ಕೊಟ್ಟಿದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು  We must introspect on what we have contributed to society


ನೇಸರಗಿ 20: ಇಂದಿನ ಪ್ರಸ್ತುತ ದಿನಗಳಲ್ಲಿ ಸಮಾಜ ನಮಗೆ ಏನು ಕೊಟ್ಟಿದೆ ಎಂದು ಕೇಳುವ ಬದಲು, ಸಮಾಜದ ಜನರಾದ ನಾವು ಸಮಾಜಕ್ಕೆ ಏನು ಕೊಟ್ಟಿದ್ದೇವೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ರುದ್ರಾಕ್ಷಿಮಠದ ಪರಮಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು.  

ಗುರುವಾರ ಬೆಳಿಗ್ಗೆ ನೇಸರಗಿ ಕ್ರಾಸ್ನ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರೆ​‍್ಣ ಮಾಡಿ, ವಿದ್ಯಾಮಂದಿರ ಪ್ರೌಢಶಾಲೆಯಿಂದ ಶ್ರಾವಣ ಮಾಸದ ಪ್ರಯುಕ್ತ ಶ್ರೀ ವೀರಭದ್ರೇಶ್ವರ ದೇವಸ್ಥಾನದವರೆಗೆ ಆಯೋಜಿಸಿದ್ದ ಬಸವ ನಡಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  

ಅಣ್ಣ ಬಸವಣ್ಣನವರ ವಚನ ಸಾಹಿತ್ಯ ಹಾಗೂ ಸಮಾನತೆಯ ಮೌಲ್ಯಗಳನ್ನು ಜಗತ್ತಿಗೆ ಸಾರಬೇಕು. “ದಯವೇ ಧರ್ಮದ ಮೂಲ” ಎಂಬ ಸಂದೇಶದೊಂದಿಗೆ ಕಳಬೇಡ, ಕೊಲಬೇಡ, ಹುಸಿಯ ನುಡಿಯಬೇಡ ಎಂಬ ಆದರ್ಶ ತತ್ವಗಳನ್ನು ಬಸವಣ್ಣನವರು ಸಾರಿದ್ದಾರೆ. ಅವರ ಚಿಂತನೆಗಳನ್ನು ಸಮಾಜದಲ್ಲಿ ಬೆಳೆಸುವ ಅಗತ್ಯವಿದೆ ಎಂದರು.  

1932ರಲ್ಲಿ ಕೆಎಲ್‌ಇ ಸಂಸ್ಥೆ ಜನರಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದರೂ ವಿದ್ಯಾರ್ಥಿಗಳಿಗೆ ವಸತಿ ಮತ್ತು ದಾಸೋಹ ವ್ಯವಸ್ಥೆ ಇರಲಿಲ್ಲ. ಇದನ್ನು ಮನಗಂಡ ಶ್ರೀ ರುದ್ರಾಕ್ಷಿಮಠದ ಲಿಂಗೈಕ್ಯ ಡಾ. ಶಿವಬಸವ ಮಹಾಸ್ವಾಮಿಗಳು ವಿದ್ಯಾರ್ಥಿಗಳಿಗೆ ವಸತಿ ಹಾಗೂ ದಾಸೋಹ ವ್ಯವಸ್ಥೆ ಕಲ್ಪಿಸಿ ಮಹತ್ವದ ಸೇವೆ ಸಲ್ಲಿಸಿದರು. ರುದ್ರಾಕ್ಷಿಮಠವು ಶಿಕ್ಷಣ, ಧಾರ್ಮಿಕ, ದಾಸೋಹ, ಸಂಸ್ಕೃತಿ, ಕನ್ನಡ ಮತ್ತು ಬಸವ ಸಾಹಿತ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ರಾಜಶೇಖರ ಯತ್ತಿನಮನಿ, ಮಲ್ಲಿಕಾರ್ಜುನ ಸೋಮನವರ, ಸಚಿನ ಪಾಟೀಲ, ಪತ್ರಕರ್ತರ ಸಂಘದ ರಾಷ್ಟ್ರೀಯ ಅಧ್ಯಕ್ಷ ಮುರುಗೇಶ ಶಿವಪೂಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಫಕೀರ​‍್ಪ ಸೋಮನವರ ಸ್ವಾಗತಿಸಿ ಪರಿಚಯಿಸಿದರು. ಅಬ್ಬಾಯಿ ಗುರುಗಳು ನಿರೂಪಿಸಿದರು.