ಪರಿಸರ ಉಳಿಸಿ, ಬೆಳೆಸಿ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಬೇಕು : ಶ್ರೀನಿವಾಸ್ ಕುಮಾರ್ ಕಿವಿಮಾತು
We should make a great contribution to society by preserving and nurturing the environment: Srinivas
ಲೋಕದರ್ಶನ ವರದಿ
ಮಾಂಜರಿ 05 : ವೈಯಕ್ತಿಕ ಸ್ವಾರ್ಥಕ್ಕಾಗಿ ಅರಣ್ಯ ನಾಶ, ಗಣಿಗಾರಿಕೆ, ಕೈಗಾರಿಕೆಯಿಂದಾಗಿ ವಾತಾವರಣ ಹಾನೀಗೀಡಾಗುತ್ತಿದೆ. ಇದರಿಂದ ಪರಿಸರಕ್ಕೆ ಮಾತ್ರವಲ್ಲದೇ ಜನರ ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ಕಾರಣ ಪ್ರತಿಯೊಬ್ಬರೂ ಪರಿಸರ ಉಳಿಸಿ, ಬೆಳೆಸಿ ಸಮಾಜಕ್ಕೆ ಮಹತ್ತರ ಕೊಡುಗೆ ನೀಡಬೇಕು ಎಂದು ರಾಯಬಾಗದ ವಲಯ ಅರಣ್ಯ ವಿಭಾಗ ಅಧಿಕಾರಿ ಶ್ರೀನಿವಾಸ್ ಕುಮಾರ್ ಕಿವಿಮಾತು ಹೇಳಿದರು.
ಅವರು ಶುಕ್ರವಾರದಂದು ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಪದ್ಮಶ್ರೀ ಡಾ ಪ್ರಭಾಕರ್ ಕೋರೆ ಇವರ ಒಡೆತನದ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಕ್ಕರೆ ಕಾರ್ಖಾನೆ ಮತ್ತು ಸಾಮಾಜಿಕ ಅರಣ್ಯ ಇಲಾಖೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಆಯೋಜಿಸಿದ ವನಮಹೋತ್ಸವದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೀವ ಸಂಕುಲದ ಉಳಿವಿಗೆ ಪರಿಸರದ ಸಂರಕ್ಷಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಡು ಬೆಳೆಸಿ ನಾಡು ಉಳಿಸುವ ಪ್ರತಿಜ್ಞೆಯೊಂದಿಗೆ ಪರಿಸರದ ಸಂರಕ್ಷಣೆಗೆ ಶ್ರಮಿಸಬೇಕು ಎಂದರು.
ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಸಿ ಓ ಓ ವಿ ಜಿ ರವಿ ಮಾತನಾಡಿ, ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಪರಿಸರ ಉಳಿಸುವ ಮಹತ್ವವನ್ನು ಸಾರುವ ಉದ್ದೇಶದಿಂದ ಪ್ರತಿವರ್ಷ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿ ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸುಸ್ಥಿರ ಪರಿಸರ ನಿರ್ಮಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ವಿಶ್ವ ಪರಿಸರ ದಿನಾಚರಣೆ ಅಂಗದ ಕಾರ್ಯಕ್ರಮಕ್ಕೆ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳಾದ ಆರ್ ಮುರಳಿ ಸಂಜಯ್ ಯಾದವ್ ಬಿ ಎಸ್ ಮುಧೋಳ್ ಭರತ್ ಮಿರಜಕರ್ ಕೇಶವ ಪ್ರಸಾದ್ ಪಾಂಡು ಬಡಗಣ್ಣವರ್ ಸಂತೋಷ್ ನಾಗಣ್ಣವರ್ ಎ ಎಸ್ ಮಾನೆ ಅಮಿತ್ ಡಿ ಕೋರೆ ರವಿ ಖಂಡಗಾವಿ ರಾಜಕುಮಾರ್ ಬೊಬನಾಳೆ ಹಾಗೂ ಸಿಬ್ಬಂದಿ ಹಾಜರಿದ್ದರು.
ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೀಡುವಾಗ ರಾಯಬಾಗ್ ವಲಯ ಅರಣ್ಯ ಅಧಿಕಾರಿಗಳಾದ ಶ್ರೀನಿವಾಸ್ ಕುಮಾರ್ ಇವರನ್ನು ಸನ್ಮಾನಿಸುವಾಗ ವಿ ಜೆ ರವಿ ಆರ್ ಮುರಲಿ ಎಸ್ ಎಸ್ ಯಾದವ್ ಬಿಎಸ್ ಮುಧೋಳ್ ಹಾಗೂ ಇನ್ನಿತರರು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 