‘ಸರ್ಕಾರದ ಸೌಲಭ್ಯಗಳನ್ನು ಪಡೆದು ಏಳಿಗೆ ಹೊಂದಬೇಕು’
We should prosper by availing government facilities'
ಲೋಕದರ್ಶನ ವರದಿ
‘ಸರ್ಕಾರದ ಸೌಲಭ್ಯಗಳನ್ನು ಪಡೆದು ಏಳಿಗೆ ಹೊಂದಬೇಕು’
ರಾಯಬಾಗ 07: ವಾಲ್ಮೀಕಿ ಸಮುದಾಯದವರು ಸರ್ಕಾರದ ಸೌಲಭ್ಯಗಳನ್ನು ಪಡೆದು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಏಳಿಗೆ ಹೊಂದಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ರವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಪರಿಶಿಷ್ಟ ಪಂಗಡ ಜನಾಂಗದವರಿಗೆ ಶೇ.7 ರಷ್ಟು ಮೀಸಲಾತಿಯನ್ನು ಹೆಚ್ಚಿಸಿದ್ದು, ಇದರ ಸದುಪಯೋಗವನ್ನು ಸಮುದಾಯದವರು ಪಡೆದುಕೊಳ್ಳಬೇಕೆಂದರು. ಗೂಟಗುದ್ದಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ರಾಜೇಂದ್ರ ಪಂಗಣ್ಣವರ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ನೈಜ ಜೀವನ ಚರಿತ್ರೆ ಅತ್ಯಂತ ಅದ್ಭುತವಾಗಿದ್ದು, ಅದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಮಹರ್ಷಿ ವಾಲ್ಮೀಕಿ ಅವರು ತಮ್ಮನ್ನು ತಾವು ಪವಿತ್ರಗೊಳಿಸಿಕೊಂಡು ಜಗತ್ತಿಗೆ ರಾಮಾಯಣ ಎಂಬ ಶ್ರೇಷ್ಠ ಕೃತಿಯನ್ನು ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಮಹಾದೇವ ಸನಮುರಿ, ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕ ವಿ.ಎಸ್.ಚಂದರಗಿ, ವಾಲ್ಮೀಕಿ ಸಮಾಜದ ಮುಖಂಡರಾದ ರಾಮಣ್ಣ ಗಸ್ತಿ, ರಾಮಚಂದ್ರ ನಾಯಿಕ, ಕಲ್ಲಪ್ಪ ಸನದಿ, ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಗ್ರೇಡ್-2 ತಹಶೀಲ್ದಾರ ಪರಮಾನಂದ ಮಂಗಸೂಳಿ, ತಾ.ಆ.ಅಧಿಕಾರಿ ಡಾ.ಎಸ್.ಎಮ್.ಪಾಟೀಲ, ಕೃಷಿ ಅಧಿಕಾರಿ ವಿನೋದ ಮಾವರಕರ, ಡಾ.ಎಮ್.ಬಿ.ಪಾಟೀಲ, ಎಚ್.ಎಲ್.ಪೂಜಾರಿ, ಆರಿ್ಬ.ಮನುವಡ್ಡರ, ಕಲ್ಪನಾ ಕಾಂಬಳೆ, ವಿಶ್ವನಾಥ ಹಾರೂಗೇರಿ, ಶರಣಪ್ಪ ಬಾಗೇವಾಡಿ, ರವಿ ತಳವಾರ, ಅಂಬರೀಶ ಕಾಂಬಳೆ, ನಾರಾಯಣ ಟೋಂಬ್ರೆ, ಮಲ್ಲಪ್ಪ ತಳವಾರ ಸೇರಿ ಅನೇಕರು ಇದ್ದರು. ಶಿಕ್ಷಕ ಶಿವಾನಂದ ಹುಲಗಬಾಳಿ ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 