ಬಿಜೆಪಿ ಅಭ್ಯರ್ಥಿ ಶೆಟ್ಟರ್ ಗೆಲುವಿಗೆ ಶ್ರಮಿಸುತ್ತೇವೆ: ಶಿವಣ್ಣ ಅಂಗಡಿ
ರಾಮದುರ್ಗ 10: ರಾಜ್ಯಮಟ್ಟದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಬೆಂಬಲ ನೀಡಿ ಅವರ ಗೆಲುವಿಗೆ ಶ್ರಮಿಸುವದಾಗಿ ಜೆ.ಡಿ.ಎಸ್. ಅಧ್ಯಕ್ಷ ಶಿವಣ್ಣ ಅಂಗಡಿ ಹೇಳಿದರು.
ಸ್ಥಳೀಯ ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೆಗೌಡ್ರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜಿಪಿಗೆ ಬೆಂಬಲ ನೀಡದ್ದು ಬಿಜೆಪಿ ಪಕ್ಷದ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ ಮಾತನಾಡಿ, ಕಳೆದ ಹತ್ತು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವೇ ಭಾರತದ ಕಡೆಗೆ ನೋಡುವಂತೆ ದೇಶದ ಅಭಿವೃದಿ ಮಾಡಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮತೊಮ್ಮೆ ಪ್ರಧಾನಿಯಾಗಿ ಆಯ್ಕೆ ಮಾಡಲು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಾಲೂಕಿನಲ್ಲಿ ಒಗ್ಗೂಡಿ ಶ್ರಮಿಸುತ್ತೇವೆಂದು ಹೇಳಿದರು.
ತಾಲೂಕಿನ ಬಿಜೆಪಿ ಎಲ್ಲವು ಸರಿಯಿಲ್ಲಾ ಮನೆಯೊಂದು ಮೂರು ಬಾಗಿಲಾಗಿದೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ, ಪಕ್ಷದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತಗೆದುಕೊಂಡು ಮುಖಂಡರ ಅಸಮಾಧಾನವನ್ನು ಸರಿಪಡಿಸಲು ರಾಜ್ಯದ ನಾಯಕರು ತೀರ್ಮಾನಿಸಿದ್ದಾರೆ. ಕೆಲವೇ ದಿನದಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಉತ್ತರಿಸಿದರು. ಬಸವರಾಜ ಕೋನನ್ನವರ ಇದ್ದರು.