ಕಾಗವಾಡ

ಹೆಲ್ಮೆಟ್ ಧರಿಸಿ, ಅಮೂಲ್ಯ ಜೀವ ಉಳಿಸಿಕೊಳ್ಳಿ: ಬಿರಾದರ

ಹೆಲ್ಮೆಟ್ ಧರಿಸಿ, ಅಮೂಲ್ಯ ಜೀವ ಉಳಿಸಿಕೊಳ್ಳಿ: ಬಿರಾದರ

ಕಾಗವಾಡ 27: ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ದ್ವಿಚಕ್ರ ವಾಹನ ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ದ್ವಿಚಕ್ರ ವಾಹನ ಚಲಾವಣೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ತಮ್ಮ ಅಮೂಲ್ಯ ಜೀವ ಉಳಿಸಿಕೊಳ್ಳುವಂತೆ ಕಾಗವಾಡ ಪಿಎಸ್‌ಐ ಜಿ.ಜಿ. ಬಿರಾದರ ತಿಳಿಸಿದ್ದಾರೆ. 

ಅವರು, ಬುಧವಾರ ದಿ. 25 ರಂದು ತಾಲೂಕಿನ ಮಂಗಸೂಳಿ ಗ್ರಾಮದ ಹೊರವಲಯದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸುತ್ತಾ ಮಾತನಾಡುತ್ತಿದ್ದರು. ಪೋಲಿಸರು ದಂಡ ವಿಧಿಸುತ್ತಾರೆ ಎಂಬ ಮಾತ್ರಕ್ಕೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೇ, ತಮ್ಮ ಅಮೂಲ್ಯ ಜೀವ ಉಳಿಸಿಕೊಳ್ಳಲು ಹೆಲ್ಮೆಟ್ ಧರಿಸಬೇಕು. ತಾವು ಮಾಡುವ ಒಂದು ತಪ್ಪಿನಿಂದ ನಿಮ್ಮನ್ನೆ ನಂಬಿಕೊಂಡಿರುವ ಕುಟಂಬವನ್ನು ಬೀದಿ ಪಾಲಾಗಾದಂತೆ ಎಚ್ಚರವಹಿಸಿ. ಇತ್ತೀಚಿನ ದಿನಗಳಲ್ಲಿ ಜನತೆ ಚಾಲನಾ ನಿಯಮಗಳನ್ನು ಪಾಲಿಸದೇ ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡುತ್ತಿದ್ದು, ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂತಹ ಅಪಘಾತ ಪ್ರಕರಣಗಳಲ್ಲಿ ಹೆಚ್ಚಾಗಿ ತಲೆಗೆ ಪೆಟ್ಟಾಗಿ ಮೃತಪಟ್ಟವರ ಸಂಖ್ಯೆಯೇ ಅಧಿಕವಾಗಿರುತ್ತದೆ. ಆದ್ದರಿಂದ ವಾಹನ ಚಾಲನೆ ಮಾಡುವಾಗ ಟ್ರಾಫಿಕ್ ನಿಯಮಗಳನ್ನು ಪಾಲಿಸವುದರೊಂದಿಗೆ ದ್ವೀಚಕ್ರ ವಾಹನ ಚಾಲಕರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಇಲ್ಲವಾದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸವಾರರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಕಾಗವಾಡ ಪೊಲೀಸ ಠಣೆಯ ಸಿಬ್ಬಂದಿ ಹಾಗೂ ಮಂಗಸೂಳಿ ಗ್ರಾಮಸ್ಥರು ಉಪಸ್ಥಿತರಿದ್ದರು. 


ಸುದ್ದಿ ಓದಿ