ಇನ್ನು ಮುಂದೆ ಮದುವೆ ದಿಬ್ಬಣದ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ಸ್ ಸಂಘಟನೆ ಅಧ್ಯಕ್ಷ ಸಂತಾನ್ ಫರ್ನಾಂಡೀಸ್ ಘೋಷಣೆ
Wedding photography will be banned from now on: Photographers Association President Santan Fernandes
ಕಾರವಾರ 06: ಮದುವೆ ಸಮಾರಂಭಗಳಲ್ಲಿ ಮದುಮಗನ ಮನೆಗೆ ಸಾಗುವ ದಿಬ್ಬಣ (ಬಾರಾತ್) ಕಾರ್ಯಕ್ರಮಗಳ ಫೋಟೊ ಹಾಗೂ ವಿಡಿಯೊ ಚಿತ್ರೀಕರಣವನ್ನು ಇನ್ನು ಮುಂದೆ ಮಾಡದಿರಲು ಕಾರವಾರ ಫೋಟೋಗ್ರಾಫರ್ಸ್ ಅಸೋಸಿಯೇಶನ್ ನಿರ್ಧಾರ ಕೈಗೊಂಡಿದೆ. ಕಾರವಾರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಸೋಸಿಯೇಶನ್ ಅಧ್ಯಕ್ಷ ಸಂತಾನ್ ಫರ್ನಾಂಡೀಸ್ ಮದುವೆ ದಿಬ್ಬಣದ ವಿಡಿಯೋ ಸಮಯದಲ್ಲಿ ವಿಡಿಯೋಗ್ರಫರ್ ಮೇಲೆ ಹಲ್ಲೆ ನಡೆದಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.
ಮದುವೆ ದಿಬ್ಬಣ ಕಾರ್ಯಕ್ರಮಗಳು ತಡರಾತ್ರಿವರೆಗೂ ಮುಂದುವರಿಯುವುದರಿಂದ ಫೋಟೋಗ್ರಾಫರ್ ಗಳು ಸಮಯದ ಮಿತಿ ಇಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ತಡರಾತ್ರಿ ಕೆಲ ಕಡೆ ಫೋಟೋಗ್ರಾಫರ್ ಹಾಗೂ ವಿಡಿಯೊಗ್ರಾಫರ್‌ಗಳೊಂದಿಗೆ ಅನುಚಿತ ವರ್ತನೆ ನಡೆದಿವೆ. ಕೆಲವು ಸಂದರ್ಭಗಳಲ್ಲಿ ಕ್ಯಾಮೆರಾಗಳನ್ನು ಕಸಿಯುವಂತಹ ಘಟನೆಗಳು ನಡೆದಿದ್ದು, ದಿಬ್ಬಣ ಕಾರ್ಯಕ್ರಮಗಳು ತಡರಾತ್ರಿವರೆಗೂ ಮುಂದುವರಿಯುವುದರಿಂದ ಸಮಯದ ಮಿತಿ ಇಲ್ಲದೆ ಕೆಲಸ ಮಾಡಬೇಕಾದ ಪರಿಸ್ಥಿತಿ ಫೋಟೋಗ್ರಾಫರ್ ಗಳಿಗೆ ನಿರ್ಮಾಣವಾಗುತ್ತಿದೆ ಎಂದು ಅಸೋಸಿಯೇಶನ್ ಸದಸ್ಯರು ಆತಂಕ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಫೋಟೋಗ್ರಾಫರ್ ಗಳ ಹಾಗು ಫೋಟೊಗ್ರಾಫಿ ಉಪಕರಣಗಳ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ಮದುವೆ ಹಾಲ್‌ನಲ್ಲಿ ಮಾತ್ರ ಫೋಟೊ ಹಾಗೂ ವಿಡಿಯೊ ಚಿತ್ರೀಕರಣ ನಡೆಸಲು ಮತ್ತು ಮದುಮಗನ ಮನೆಗೆ ಸಾಗುವ ದಿಬ್ಬಣ (ಬಾರಾತ್) ಕಾರ್ಯಕ್ರಮಗಳ ಚಿತ್ರೀಕರಣ ಮಾಡದಿರಲು ಅಸೋಸಿಯೇಶನ್‌ನ ಎಲ್ಲಾ ಸದಸ್ಯರು ಸಭೆ ನಡೆಸಿ, ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದರು.
ಇನ್ನು ದಿನದಿಂದ ದಿನಕ್ಕೆ ಫೋಟೊಗ್ರಾಫಿ ಉಪಕರಣಗಳು, ಸಾಮಗ್ರಿಗಳು ಹಾಗೂ ನಿರ್ವಹಣಾ ವೆಚ್ಚಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಸ್‌ಪೋರ್ಟ್ ಸೈಜ್ ಫೋಟೊ ಸೇರಿದಂತೆ ವಿವಿಧ ಫೋಟೋಗ್ರಫಿ ಸೇವೆಗಳ ದರವನ್ನು ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಸಂತಾನ್ ಫರ್ನಾಂಡೀಸ್, ಸೂರಜ್ ಜೋಗಳೆಕರ್, ಬಾಲಚಂದ್ರ, ಶೈಲೇಶ, ಅನಂತ ಪೈ, ಅನಿಲ ನಾಯ್ಕ, ರವಿ ನಾಯ್ಕ, ರವಿ ಕಾಂಬ್ಳೆ, ಮನೋಜ ನಾಯ್ಕ, ಪ್ರಮೋದ ನಾಯ್ಕ, ಸುರೇಶ ಶೇಣ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 