ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
Welcome program for students
ತಾಳಿಕೋಟಿ 16: ಶ್ರೀ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ರಹ್ಮಲಿಂಗೇಶ್ವರ ಹಾಗೂ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ 2026-2027 ರ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ದಿನಾಂಕ 16-06-2026 ರ ಮಂಗವಾರ ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಪುಷ್ಪಗುಚ್ಚ ನೀಡಿ ಉಚಿತ ಶಾಲಾ ಬ್ಯಾಗ,ಸಮವಸ್ತ್ರ, ಪಠ್ಯ ಪುಸ್ತಕ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ ಎಚ್.ಎಸ್.ಪಾಟೀಲರ ಸರಳ ರೀತಿಯಲ್ಲಿ ಜನ್ಮದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಎಚ್.ಎಸ್.ಪಾಟೀಲ, ಪ ಪೂ ಕಾಲೇಜಿನ ಆಂಗ್ಲ ಭಾಷೆಯ ಉಪನ್ಯಾಸಕರಾದ ಪರಶುರಾಮ ಚೌಡಕರ ಮುಖ್ಯ ಅತಿಥಿಯಾಗಿದ್ದರು.
ಸಂಸ್ಥೆಯ ಕಾರ್ಯದರ್ಶಿಗಳಾದ ಸಚಿನ.ಎಚ್.ಪಾಟೀಲ, ಶ್ರೀ ಎಸ್.ಎಸ್.ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು ಮತ್ತು ವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನಮ್ಮ ಸಂಸ್ಥೆಯ ಕುಟುಂಬ ಇದ್ದಂತೆ ಎಂದು ಹೇಳಿದರು.ಶಿಕ್ಷಕ ಎಸ್.ಸಿ.ಗುಡಗುಂಟಿ ಸ್ವಾಗತಿಸಿದರು, ಎಸ್.ಎಸ್.ವಿದ್ಯಾ ಸಂಸ್ಥೆಗೆ ಹೊಸದಾಗಿ ಆಗಮಿಸಿದ ಉಪನ್ಯಾಸಕರನ್ನು ಶಿಕ್ಷಕ/ಶಿಕ್ಷಕಿಯರನ್ನು ಹಾಗೂ ಶಾಲಾ ವಾಹನ ಚಾಲಕರನ್ನು ಸ್ವಾಗತಿಸಿಕೊಂಡರು ಮತ್ತು ಸಂಸ್ಥೆಯ ಅದ್ಯಕ್ಷರು ಅವರನ್ನು ಸನ್ಮಾನಿಸಿ ಗೌರವಸಿದರು. ಕಾರ್ಯಕ್ರಮ ಶಿಕ್ಷಕ ಬಿ.ಆಯ್.ಹಿರೇಹೊಳಿ ನಿರೂಪಿಸಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 