ಧಾರವಾಡ - ಹುಬ್ಬಳ್ಳಿ

ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ: ದೀಕ್ಷಾ ಬೋಧ ಸಮಾರಂಭ

ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ: ದೀಕ್ಷಾ ಬೋಧ ಸಮಾರಂಭ

ಧಾರವಾಡ 02:  ವಿದ್ಯಾರ್ಥಿಗಳು ಕಾಲೇಜು ಶಿಕ್ಷಣದ ಜೊತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಕಲ್ಪನೆ ಮತ್ತು ಅದಕ್ಕೆ ಪೂರಕವಾದ ಪುಸ್ತಕಗಳ ಸಂಗ್ರಹ ಮತ್ತು ಅಧ್ಯಯನಶೀಲತೆ ನಿರಂತರವಾಗಿರಬೇಕು. ವಿದ್ಯಾರ್ಥಿ ಜೀವನ ಅತಿ ಅಮೂಲ್ಯವಾದದ್ದು, ಸರಿಯಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಆಧುನಿಕತೆಯ ಹಿಂದೆ ಬಿದ್ದು ಸಮಯ ವ್ಯರ್ಥಮಾಡದೇ ಕಲಿಕೆಗೆೆ ಪ್ರಾಶಸ್ತ್ಯ ನೀಡಿ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಜೆಎಸ್‌ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಮ್ಮಿಕೊಂಡಿದ್ದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ದೀಕ್ಷಾ ಬೋಧ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಕಾಲೇಜಿನ ಸಂಪೂರ್ಣ ಪರಿಚಯ ಮಾಡಿಕೊಟ್ಟರು. ಮತ್ತು ಕಾಲೇಜಿನಲ್ಲಿರುವ ಗ್ರಂಥಾಲಯ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಗ್ರಂಥಾಲಯದ ವಿಶೇಷತೆಗಳ ಬಗ್ಗೆ ತಿಳಿಸಿದರು. ಗ್ರಂಥಾಲಯದ  ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳುವುದರತ್ತ ಗಮನ ಹರಿಸಬೇಕೆಂದು ಹೇಳಿದರು. ಕಾಲೇಜು ವಿದ್ಯಾರ್ಥಿಗಳ ಕಲೆ, ಕ್ರೀಡೆ, ಸಾಂಸ್ಕೃತಿಕ ಮುಂತಾದ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದು ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿ ಹೊರಹೊಮ್ಮಲು ಸಹಕಾರ ನೀಡುವುದು.  ಪಠ್ಯ ಮತ್ತು. ಪಠ್ಯೆತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭಕೋರಿದರು. 

ಕಾರ್ಯಕ್ರಮದಲ್ಲಿ ಡಾ. ಸೂರಜ್ ಜೈನ್ ಸ್ವಾಗತಿಸಿದರು. ಪ್ರೊ. ಮಹಾಂತ ಎಂ. ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಆರ್‌. ವಿ. ಚಿಟಗುಪ್ಪಿ, ವಾಣಿಜ್ಯ ಶಾಸ್ತ್ರ ಮುಖ್ಯಸ್ಥರಾದ ಪ್ರೊ. ಶ್ರೀಕಾಂತ ರಾಗಿಕಲ್ಲಾಪುರ, ಬಿ.ಎಸ್ಸಿ ಮತ್ತು ಬಿಸಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ವಿವೇಕ ಲಕ್ಷ್ಮೇಶ್ವರ ಹಾಗೂ ಬಿಬಿಎ ವಿಭಾಗದ ಮುಖ್ಯಸ್ಥರಾದ ಪ್ರೊ. ಎನ್‌. ಜಿ. ಪುಡಕಲಕಟ್ಟಿ, ಹಾಗೂ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು . ಕಾಲೇಜಿನ ಉಪಪ್ರಾಚಾರ್ಯರಾದ ಪ್ರೊ. ವಿವೇಕ ಲಕ್ಷ್ಮೇಶ್ವರ ವಂದಿಸಿದರು. ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. 


ಸುದ್ದಿ ಓದಿ