ಕೃಷಿ ವಿರೋಧಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ವೆಲ್ಫೇರ್ ಪಾರ್ಟಿ ಆಗ್ರಹ
ಬೆಂಗಳೂರು, ಜೂ.13, ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಆದಿಲ್ ಪಟೇಲ್ ಒತ್ತಾಯಿಸಿದ್ದಾರೆ.ಸರ್ಕಾರ ರಿಯಲ್ ಎಸ್ಟೇಟ್ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು 1961ರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಸರ್ಕಾರದ ಈ ನಡೆ ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.'ಸದ್ಯ ಕೃಷಿಕರಿಗೆ ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶವಿದೆ.
ಕಾಯ್ದೆ ತಿದ್ದುಪಡಿಯಾದರೆ ಕೃಷಿಕರಲ್ಲದವರಿಗೂ ಕೃಷಿ ಭೂಮಿ ಖರೀದಿಸಲು ಅವಕಾಶ ಸಿಗುತ್ತದೆ. ಇದು ಕೃಷಿ ಕ್ಷೇತ್ರದ ಮೇಲೆ ಪ್ರತಿಗಾಮಿ ಪರಿಣಾಮ ಬೀರುತ್ತದೆ' ಆತಂಕ ವ್ಯಕ್ತಪಡಿಸಿದರು.'ಸರ್ಕಾರ ರೈತರನ್ನು ಬೀದಿಗೆ ತಳ್ಳಿ, ರಿಯಲ್ ಎಸ್ಟೇಟ್ ಉದ್ಯಮಿಗಳ ಹಿತ ಕಾಯಲು ಹೊರಟಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರ್ಕಾರ ಇದೀಗ ರೈತರಿಗೆ ಮತ್ತೊಂದು ಆಘಾತ ನೀಡಿದೆ' ಎಂದು ಕಿಡಿಕಾರಿದರು.ಹೋರಾಟದ ಎಚ್ಚರಿಕೆ: 'ದೇಶದಲ್ಲಿ ಶೇ 80ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ಇವರು ಹಣದಾಸೆಗೆ ಭೂಮಿ ಮಾರಾಟ ಮಾಡಿದರೆ ಭವಿಷ್ಯದಲ್ಲಿ ಎಂದಿಗೂ ಜಮೀನು ಖರೀದಿಸಲು ಸಾಧ್ಯವಾಗುವುದಿಲ್ಲ. ರೈತ ಕುಲಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ' ಎಂದು ಎಚ್ಚರಿಕೆ ನೀಡಿದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 