ಪಶ್ಚಿಮ ಬಂಗಾಳ: ದಿಡೀರ್ ಕೆಲಸಕ್ಕೆ ರಾಜಿನಾಮೆ ಕೊಟ್ಟ 400 ದಾದಿಯರು..!!
ಕೊಲ್ಕತ್ತಾ , ಮೇ, 18,ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಅದರಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವಾಗಲೇ ಸುಮಾರು 400 ದಾದಿಯರು ಕೆಲಸಕ್ಕೆ ರಾಜೀನಾಮೆ ನೀಡಿರುವ ಆಘಾತಕಾರಿ ಸುದ್ದಿ ಹೊರ ಬಂದಿದೆ. 185 ದಾದಿಯರು ಶನಿವಾರ ಮಣಿಪುರಕ್ಕೆ ಹಿಂದಿರುಗಿದ್ದರೆ, ಇನ್ನೂ 186 ಮಂದಿ ಒಡಿಶಾ, ಜಾರ್ಖಂಡ್, ಛತ್ತೀಸ್ಗಡ ಮತ್ತು ಇತರ ರಾಜ್ಯಗಳತ್ತ ಹೊರಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ದಾದಿಯರೆಲ್ಲರೂ ಕೋಲ್ಕತಾ ಸೇರಿದಂತೆ ರಾಜ್ಯಾದ್ಯಂತ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಈ ರೀತಿಯಾಗಿ ರಾಜೀನಾಮೆ ನೀಡಿರುವುದಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ . ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸಾವಿನ ಸಂಖ್ಯೆ 232ಕ್ಕೆ ಏರಿಕೆಯಾಗಿರುವ ನಡುವೆಯೇ ಈ ನಿರ್ಧಾರ ಕೈಗೊಂಡಿರುವುದರಿಂದ ರಾಜ್ಯ ಸರ್ಕಾರ ದಿಗಿಲುಗೊಂಡಿದ್ದು, ಅವರ ಮನ ಒಲಿಸಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 