ರಾಜ್ಯ ಸರಕಾರದಲ್ಲಿ ಹಣವಿಲ್ಲ ಎಂಬುದರ ಕುರಿತು ಶ್ವೇತಪತ್ರ ಹೊರಡಿಸಿ: ಡಾ.ಜಿ. ಪರಮೇಶ್ವರ
ಬೆಂಗಳೂರು, ಅ 10: ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಿದರೆ ಯಾವುದೇ ತೊಂದರೆಯಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ದಾಳಿ ಬಗ್ಗೆ ನಿಖರ ಮಾಹಿತಿ ಇಲ್ಲ. ನಮ್ಮ ಸಂಸ್ಥೆ ಮೇಲೆ ದಾಳಿ ಮಾಡಿದರೆ ಸ್ವಾಗತ. ಎಲ್ಲಾ ರೀತಿಯ ದಾಖಲೆಗಳನ್ನು ಪರಿಶೀಲಿಸಲಿ. ಹಾಗೆಯೇ ಅವರ ಸಲಹೆಯಂತೆ ನಡೆದುಕೊಳ್ಳಲಿದ್ದೇವೆ ಎಂದು ಪ್ರತಿಕ್ರಿಯಿಸಿದರು. ಕರ್ನಾಟಕದಲ್ಲಿ ಅತ್ಯಂತ ಭೀಕರ ನೆರೆ ಉಂಟಾಗಿದೆ. ಜನ ಜಾನುವಾರಗಳ ಪ್ರಾಣ ಹಾನಿ, ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ, ಕೇಂದ್ರದಿಂದ ಪರಿಹಾರ ಪಡೆಯಲು ರಾಜ್ಯದಿಂದ ಪಕ್ಷಾತೀತವಾಗಿ ನಿಯೋಗ ತೆಗೆದುಕೊಂಡು ಹೋಗುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಿಲ್ಲ. ಈ ಬಗ್ಗೆ ಸದನದಲ್ಲಿ ದನಿ ಎತ್ತಲಿದ್ದೇವೆ ಎಂದರು. ರೈತರ ಸಾಲಮನ್ನಾವನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ, ಕೇವಲ ಲೇಖಾನುದಾನದಿಂದ ಹಣ ಬಿಡುಗಡೆ ಆಗದು. ಈ ಅಧಿವೇಶನದಲ್ಲಿ ಬಜೆಟ್ಗೆ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದರು. ಪಿಡಬ್ಲ್ಯೂಡಿ ಇಲಾಖೆಯಿಂದ ಬಿಡುಗಡೆಯಾಗಿದ್ದ ಕೆಲ ಯೋಜನೆಗಳನ್ನು ಈ ಸರಕಾರ ತಡೆಹಿಡಿದಿರುವುದು ಸರಿಯಲ್ಲ. ಸರಕಾರದಿಂದ ಆದೇಶ ಆಗಿರುವ ಯೋಜನೆ ತಡೆಯಿಡಿಯಲು ಸಾಧ್ಯವಿಲ್ಲ. ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲವೆಂದು ಕೆಲ ಸಚಿವರುಗಳು ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ರಾಜ್ಯ ಸರಕಾರದ ಹಣಕಾಸಿನ ಸ್ಥಿತಿಗತಿ ಬಗ್ಗೆ ಕೂಡಲೇ ಶ್ವೇತ ಪತ್ರ ಹೊರಡಿಸಿ, ಹಣವಿಲ್ಲವೆಂದು ಹೇಳಲಿ ಎಂದು ಒತ್ತಾಯಿಸಿದರು. ಒಬ್ಬಬ್ಬ ಸಚಿವರು ಹಣಕಾಸಿನ ಸ್ಥಿತಿ ಗತಿ ಬಗ್ಗೆ ಒಂದೊಂದು ರೀತಿಯ ಅಭಿಪ್ರಾಯ ಹೊರಹಾಕುತ್ತಿದ್ದಾರೆ, ಜನಸಾಮಾನ್ಯರಿಗೆ ವಾಸ್ತವತೆ ತಿಳಿಯಬೇಕಿದ್ದರೆ ಕೂಡಲೇ ಶ್ವೇತಪತ್ರ ಹೊರಡಿಸಲಿ ಎಂದರು. ವಿಧಾನಸಭೆ ಅಧಿವೇಶನ ಚಿತ್ರೀಕರಿಸಲು ಮಾಧ್ಯಮಗಳ ನಿರ್ಬಂಧ ಖಂಡನೀಯ. ಅಧಿವೇಶನದಲ್ಲಿ ಚರ್ಚೆಯಾಗುವ ವಿಚಾರವನ್ನು ಜನರಿಂದ ಮುಚ್ಚಿಡುವ ಅಗತ್ಯವೇನಿದೆ. ಯಾವ ಕಾರಣಕ್ಕಾಗಿ ಬಿಜೆಪಿ ಸರಕಾರ ಈ ನಿರ್ಧಾರ ಮಾಡಿದ್ದಾರೆ ತಿಳಿದಿಲ್ಲ. ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡಲಾಗಿದೆ. ಈ ವಿಷಯವನ್ನು ಸಹ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಾಗುತ್ತದೆ ಎಂದರು. ನಾನು ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿ ಎಂದು ಎಲ್ಲಿಯೂ ಹೇಳಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗುತ್ತೇವೆ. ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿ ಯಾವ ನಾಯಕರೂ ವಿರೋಧ ಮಾಡಿಲ್ಲ. ಅವರೂ ಅರ್ಹರು ಹಾಗೂ ಅನುಭವದ ಮೇಲೆ ನನಗೂ ಸ್ಥಾನ ನೀಡಿ ಎಂದು ಎಚ್.ಕೆ. ಪಾಟೀಲ್ ಕೇಳಿದ್ದರೆ ವಿನಃ ವಿರೋಧವಲ್ಲ. ಕಾಂಗ್ರೆಸ್ನಲ್ಲಿ ಮೂಲ ಅಥವಾ ವಲಸಿಗರು ಎಂಬ ಭೇದವಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಗೊತ್ತಿಲ್ಲ. ಹೈಕಮಾಂಡ್ನ ನಿರ್ಧಾರದಂತೆ ನಾವೆಲ್ಲಾ ನಡೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 