ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಟ್ಟ ಯಾರಿಗೆ
ಸಚೀನ ಇಂಡಿ
ಇಂಡಿ 18: ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುವುದೇ ಕೂತುಹಲಕಾರಿಯಾಗಿದೆ. ತಡವಲಗಾ ಗ್ರಾಮ ಪಂಚಾಯಿತಿಯು ಒಟ್ಟು 29 ಸದಸ್ಯರ ಸಂಖ್ಯಾ ಬಲ ಉಳ್ಳ ಗ್ರಾಮ ಪಂಚಾಯಿತಿ ಇದು ಆಗಿದ್ದು, ಇದೆ ದಿ. 16-05-2024 ರಂದು ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಹೊಸಮನಿ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇದೆ ದಿ. 24-06-2024 ರಂದು ಚುನಾವಣೆ ಜರುಗಿಸಸಲು ಗೊತ್ತುಪಡಿಸಿದ ಅಧಿಕಾರಿಗಳು ಹಾಗೂ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಇವರ ನೇತೃತ್ವದಲ್ಲಿ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಈ ಹಿನ್ನೆಲೆಯಲ್ಲಿ ತ್ರೀವ ಪೈಪೋಟಿ ನಡೆದಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದರೆ ಕೊನೆಯ ಕ್ಷಣದಲ್ಲಿ ಅಧ್ಯಕ್ಷ ಗಾದಿ ಯಾರ ಪಾಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಜಿಲ್ಲೆಯಲ್ಲಿ ಹೆಸರುವಾಸಿಯಾದ ತಡವಲಗಾ ಗ್ರಾಮ ಪಂಚಾಯಿತಿ ಚುನಾವಣೆ ಈ ಬಾರಿ ಶಾಂತಿಯಿಂದ ಜರುಗಿಸಲು ಹೋರ್ತಿ ಪೋಲಿಸ್ ಠಾಣೆ ಪಿಎಸ್ಐ ಸೀತಾರಾಮ ಲಮಾಣಿ ಅವರು ಸನ್ನದ್ಧರಾಗಿದ್ದಾರೆ. ಏನೇ ಇರಲಿ, ಯಾರೆ ತಡವಲಗಾ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಲಿ, ಗ್ರಾಮದ ಜ್ವಲಂತ ಸಮಸ್ಯೆಗಳಾದ ಕುಡಿಯುವ ನೀರು, ಚರಂಡಿ, ರಸ್ತೆ ಸಮಸ್ಯೆಗಳು ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ಆಗಲಿ ಎಂಬೂವುದೇ ನಮ್ಮ ಆಸೆ.