ಹೂವಿನ ಹಡಗಲಿ

ವಿಧವಾ, ವೃದ್ಧಾಪ್ಯ ವೇತನ ಸ್ಥಗಿತ ,ಸರ್ಕಾರ ದಿವಾಳಿ : ಆರೋಪ

ವಿಧವಾ, ವೃದ್ಧಾಪ್ಯ ವೇತನ ಸ್ಥಗಿತ ,ಸರ್ಕಾರ ದಿವಾಳಿ : ಆರೋಪ


ಹೂವಿನಹಡಗಲಿ:  ಅ.22- ರಾಜ್ಯದಲ್ಲಿ ವೃದ್ಧಾಪ್ಯ ಹಾಗೂ ವಿಧವಾ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಸರ್ಕಾರ ದಿವಾಳಿಯಾಗಿದೆ ಎಂದು ವಿಜಯನಗರ ಜಿಲ್ಲಾ ಮಾಜಿ ಕೆಡಿಪಿ ಸದಸ್ಯ ಎಂ.ಬಿ. ಬಸರಾಜ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾ ಹೇಳಿಕೆಯಲ್ಲಿ ಸುಮಾರು 18 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವೃದ್ಧರು ದಿನ ನಿತ್ಯದ ವೈದ್ಯಕೀಯ ಚಿಕಿತ್ಸೆ ಖರ್ಚು ಜತೆಗೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.


ಕೂಡಲೇ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅವರು, ಸಾರಿಗೆ, ವೃದ್ಧಾಪ್ಯ ವೇತನ, ಆರೋಗ್ಯ, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ​‍್ಕವಾಗಿ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.


ಗ್ಯಾರಂಟಿ ಯೋಜನೆಗಳಿಗೆ ಹಣ ಹಂಚಿಕೆ ಮಾಡುವುದರ ಜೊತೆಗೆ ವೃದ್ಧರು ಸೇರಿದಂತೆ ದುರ್ಬಲ ವರ್ಗದ ಜನರ ಹಿತಾಸಕ್ತಿಗೂ ಸರ್ಕಾರ ಆದ್ಯತೆ ನೀಡಬೇಕು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ಪ್ರಮುಖರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬಾಕಿ ಇರುವ ವೃದ್ಧಾಪ್ಯ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜನರ ಹಿತ ಕಾಪಾಡುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಎಂ.ಬಿ. ಬಸರಾಜ್ ಆಗ್ರಹಿಸಿದರು. 


ಸುದ್ದಿ ಓದಿ