ನಶೆಯ ಅಮಲಿನಲ್ಲಿ ಗಂಡನಿಂದ ಹೆಂಡಿತಿಯ ಕೊಲೆ
Wife murdered by husband under the influence of drugs
ಕ್ರೈಂ,
ಲೋಕದರ್ಶನ ವರದಿ,
ಜಮಖಂಡಿ 24: ತಾಲ್ಲೂಕಿನಲ್ಲಿ ಸತತವಾಗಿ ನಡೆಯುತ್ತಿರುವ ಈ ಕೊಲೆ ಪ್ರಕರಣಗಳು ನಿಜಕ್ಕೂ ಆತಂಕಕಾರಿ ಮತ್ತು ದುರದೃಷ್ಟಕರ ಸಂಗತಿ. ತೊದಲಬಾಗಿ, ತುಂಗಳ ಮತ್ತು ಕನ್ನೊಳ್ಳಿ ಗ್ರಾಮಗಳಲ್ಲಿ ಬೆನ್ನುಬೆನ್ನಿಗೆ ಇಂತಹ ಘಟನೆಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸಿರುವುದರಲ್ಲಿ ಸಂಶಯವಿಲ್ಲ.
ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ತಡರಾತ್ರಿಯಲ್ಲಿ ಗಂಡನಿಂದ ಹೆಂಡಿತಿಯ ಕೊಲೆ ಮಾಡಿರುವ ಘಟನೆ ನಡೆದಿದೆ.
ನಾಗನೂರ ಗ್ರಾಮದ ಮಲ್ಲಪ್ಪ ಸಿದ್ರಾಯ ತೋಟದ (30) ನಶೆಯ ಅಮಲಿನಲ್ಲಿ ತಡರಾತ್ರಿಯಲ್ಲಿ ತನ್ನ ಹೆಂಡತಿಯ ಮೇಲೆ ಸಂಶಯಪಟ್ಟು ಸೌಮ್ಯ ಸಿದ್ರಾಯ ತೋಟದ (32) ಅವಳಿಗೆ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ಹೆತ್ತ ತಾಯಿಯನ್ನು ಕಳೆದುಕೊಂಡ ಇಬ್ಬರು ಪುಟ್ಟ ಮಕ್ಕಳ ಸ್ಥಿತಿ ಅತಂತ್ರವಾಗಿರುವುದು ಅತ್ಯಂತ ನೋವಿನ ಸಂಗತಿ. ಮಕ್ಕಳ ಅಕ್ರಂದನ ಮುಗಿಲು ಮುಟ್ಟುವಂತೆ ಆಗಿದೆ.
ಘಟನಾ ಸ್ಥಳಕ್ಕೆ ಡಿಎಸ್ಪಿ.ಸೈಯದ್ ರೋಷನ್ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ, ಸಾವಳಗಿ ಪಿಎಸ್ಐ. ಅಪ್ಪಣ್ಣ ಐಗಳಿ, ಜಮಖಂಡಿ ಗ್ರಾಮೀಣ ಪಿಎಸ್ಐ ಗಂಗಾಧರ ಪೂಜಾರಿ ಸೇರಿದಂತೆ ಪೋಲಿಸರು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 