ಬಸವಣ್ಣನವರ ಬಗ್ಗೆ ಅವಹೇಳನ ಸಹಿಸುವುದಿಲ್ಲ-ಸಿ.ಕೆ.ಎಂ.ಬಸವಲಿಂಗಸ್ವಾಮಿ
ಲೋಕದರ್ಶನ ವರದಿ
ಹೂ.ಹಡಗಲಿ/ಬೆಂಗಳೂರು ನ.24: ಜಗತ್ತಿಗೆ ಸಮಾನತೆ, ಕಾಯಕ ಮತ್ತು ದಾಸೋಹ ಮಹತ್ವವನ್ನು ಸಾರಿದ ಮಹಾನ್ ಮಾನವತಾವಾದಿ ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕರು ಮಾತ್ರವಲ್ಲ, ಇಡೀ ವಿಶ್ವದ ಗೌರವಕ್ಕೆ ಪಾತ್ರರಾದ ವಿಶ್ವಮಾನವರು. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡುವುದು, ಬರೆಯುವುದು, ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅ.ಭಾ.ವೀ. ಲಿಂಗಾಯ್ತ ತಾಲೂಕು ಅದ್ಯಕ್ಷ ಸಿ.ಕೆ.ಎಂ.ಬಸವಲಿಂಗಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ನ.15 ರಂದು ಲೇಖಕ ರವಿ ಹಂಜ್ ಇವರು ಬರೆದು ಲೋಕಾರೆ್ಣ ಯಾದ "ಬಸವ ಮಂಟಪ" ಕೃತಿಯಲ್ಲಿ ಭಕ್ತಿ ಭಂಡಾರಿ ಬಸವಣ್ಣನವರ ಬಗ್ಗೆ ಅವಹೇಳನಕಾರಿ ಲೇಖನ ಪ್ರಕಟಿಸಿದ್ದು ಇದರಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಅವಮಾನ ಮಾಡಿದ್ದು ಈ ಬಗ್ಗೆ ರಾಜ್ಯಾದ್ಯಂತ ಲೇಖಕರ ಬಗ್ಗೆ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದು ಆ ಬಗ್ಗೆ ಸರ್ಕಾರವು ನ.19 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ "ಬಸವ ಮಂಟಪ" ಕೃತಿಯನ್ನ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಲೇಖಕರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದಯಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಸಂಪುಟದ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.