ವಿಪ್ರೋ ಏರೋಸ್ಪೇಸ್ನಿಂದ ವಿದ್ಯಾರ್ಥಿಗಳಿಗೆ ಬೃಹತ್ ಪೂಲ್ ಕ್ಯಾಂಪಸ್ ಸಂದರ್ಶನ
ವಿಜಯಪುರ, ಅ. 8: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುರುವಾರ ವಿಶ್ವಖ್ಯಾತ ವಿಪ್ರೋ ಏರೋಸ್ಪೇಸ್ (ಘಠಿಡಿಠ ಂಜಡಿಠಿಚಿಛಿಜ) ಸಂಸ್ಥೆಯ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ಬೃಹತ್ ಪೂಲ್ ಕ್ಯಾಂಪಸ್ ಉದ್ಯೋಗ ಸಂದರ್ಶನ ನಡೆಯಿತು.
ಅಂತಿಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಹಾಗೂ ಆಟೋಮೊಬೈಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಪೂಲ್ ಕ್ಯಾಂಪಸ್ ಸಂದರ್ಶನದಲ್ಲಿ ವಿಜಯಪುರ ಜಿಲ್ಲೆ ಮಾತ್ರವಲ್ಲದೆ,
ಬಾಗಲಕೋಟೆ ಸೇರಿದಂತೆ ಸುತ್ತಮುತ್ತಲಿನ ವಿವಿಧ ಭಾಗಗಳ ಸರ್ಕಾರಿ ಹಾಗೂ ಖಾಸಗಿ ಪಾಲಿಟೆಕ್ನಿಕ್ ಕಾಲೇಜುಗಳಿಂದ 150ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಪ್ರೋ ಏರೋಸ್ಪೇಸ್ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಮಿಥಿಲೇಶ್ ಹಾಗೂ ಮಿಸ್ ಮರಿಯಾ ಲಿಖಿತ ಪರೀಕ್ಷೆ ಮತ್ತು ತಾಂತ್ರಿಕ ಮೌಖಿಕ ಸಂದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ಪಾಲಿಟೆಕ್ನಿಕ್ನ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗ ಅಧಿಕಾರಿ ಸುಧನ್ವ ವಿ. ಕುಲಕರ್ಣಿ, ಪಾಂಡುರಂಗ ಅಸ್ಲಂಕರ್, ಈರೇಶ ಪಾಟೀಲ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂತಹ ಬೃಹತ್ ಪೂಲ್ ಕ್ಯಾಂಪಸ್ ಡ್ರೈವ್ಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದರು.
ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಎಂ.ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮತ್ತು ಆಡಳಿತ ಮಂಡಳಿಯ ನಿರ್ದೇಶಕರು ಸಂತಸ ವ್ಯಕ್ತಪಡಿಸಿ, ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.